Advertisement

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ

12:15 PM Dec 12, 2021 | Team Udayavani |

ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾನುವಾರ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಭೇಟಿ ನೀಡಿ ಹೆಲಿಕಾಪ್ಟರ್ ದುರಂತದಲ್ಲಿ ಗಾಯಾಳಾಗಿ ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು.

Advertisement

ಈ ಸಂದರ್ಭದಲ್ಲಿ ಕರ್ನಾಟಕ ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಸೂದ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಚಿವರು ಸಿಂಗ್ ಅವರ ಕುಟುಂಬ ಸದಸ್ಯರನ್ನೂ ಭೇಟಿ ಮಾಡಿ ಮಾಡಿದರು.

ಬುಧವಾರ ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ವರುಣ್ ಸಿಂಗ್ ಬದುಕುಳಿದಿದ್ದ ಏಕ ಮಾತ್ರ ಯೋಧ. ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಮಂದಿ ಸಾವನ್ನಪ್ಪಿದ್ದರು.

Advertisement

ಸಿಂಗ್ ಅವರನ್ನು ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್‌ನಿಂದ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next