Advertisement

ಕೋವಿಡ್ ಸಂಕಷ್ಟದಲ್ಲೂ ಅಭಿವೃದ್ಧಿ ಕಾರ್ಯಕ್ಕಿಲ್ಲ ಅಡ್ಡಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

05:12 PM May 18, 2021 | Team Udayavani |

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಜನರಿಗೆ ಪ್ರಾಥಮಿಕ ಹಂತದ ಆರೋಗ್ಯ ಸೇವೆ ನೀಡುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈ ಯೋಜನೆಯ ಅನುಷ್ಠಾನದಲ್ಲಿ ಉತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Advertisement

ಈ ಸಾಧನೆ ಕುರಿತು ಸಂತಸ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ಇಡೀ ದೇಶದಲ್ಲಿಯೇ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದೆ. ಗ್ರಾಮೀಣ ಪ್ರದೇಶಗಳಲ್ಲಿರುವ ಜನರು ದೂರದ ನಗರ ಪ್ರದೇಶಗಳಿಗೆ ಸಂಚರಿಸಿ ಆರೋಗ್ಯ ಸೇವೆ ಪಡೆಯುವ ಹೊರೆಯನ್ನು ತಪ್ಪಿಸಿ, ಸುಲಭವಾಗಿ ತಮ್ಮ ಮನೆಯ ಸಮೀಪದಲ್ಲೇ ಆರೋಗ್ಯ ಸೇವೆ ಪಡೆಯಬೇಕೆನ್ನುವುದು ನಮ್ಮ ಸರ್ಕಾರದ ಗುರಿ. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಈ ನಿಟ್ಟಿನಲ್ಲಿ ಬಹಳ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಸಾಧನೆಗಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಈಗ ಆರೋಗ್ಯ ಕ್ಷೇತ್ರ ಕೋವಿಡ್ ನಿವಾರಿಸುವ ಕಡೆ ಹೆಚ್ಚು ಗಮನ ನೀಡಿದೆ. ಕೋವಿಡ್ ನಿಂದ ಆರ್ಥಿಕ ಸಂಕಷ್ಟವೂ ಉಂಟಾಗಿದೆ. ಇಷ್ಟಿದ್ದರೂ ರಾಜ್ಯದಲ್ಲಿ ಇತರೆ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಯಾವುದೇ ಹಿನ್ನೆಡೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಹೋಂ ಐಸೋಲೇಶನ್ ನಲ್ಲಿರುವವರನ್ನು ಕೋವಿಡ್ ಕೇರ್ ಸೆಂಟರ್ ಗೆ ಕರೆ ತನ್ನಿ :  ಸುನೀಲ್ ಕುಮಾರ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಂಡ ಈ ಯೋಜನೆಯಲ್ಲಿ, 2020-21 ನೇ ಸಾಲಿನಲ್ಲಿ ಕರ್ನಾಟಕ ಉತ್ತಮ ರಾಜ್ಯ ಎಂದೆನಿಸಿಕೊಂಡಿದೆ. ಉಪಕೇಂದ್ರಗಳ ವಿಭಾಗದಲ್ಲಿ 2,263 ಎಚ್‍ಡಬ್ಲ್ಯುಸಿ ಆರಂಭಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ಮಾರ್ಚ್ 31 ರವರೆಗೆ, 3,300 ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಅಂದರೆ, ನಿಗದಿತ ಗುರಿಗಿಂತ 146% ರಷ್ಟು ಸಾಧನೆಯಾಗಿದೆ. 2,096 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, 2,168 ಪೂರ್ಣವಾಗಿದೆ. ಅಂದರೆ ನಿಗದಿತ ಗುರಿಗಿಂತ 103% ರಷ್ಟು ಸಾಧನೆಯಾಗಿದೆ. 294 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, 364 ಕೇಂದ್ರ ರೂಪಿಸಲಾಗಿದೆ. ಅಂದರೆ, ನಿಗದಿತ ಗುರಿಗಿಂತ 124% ರಷ್ಟು ಸಾಧನೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ 4,653 ಎಚ್‍ಡಬ್ಲ್ಯುಸಿ ಸ್ಥಾಪಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ಗುರಿಯನ್ನು ಮೀರಿ 5,832 ಕೇಂದ್ರಗಳನ್ನು ಆರಂಭಿಸಲಾಗಿದೆ. ಅಂದರೆ, ಒಟ್ಟಾರೆಯಾಗಿ 125% ರಷ್ಟು ಸಾಧನೆಯನ್ನು ರಾಜ್ಯ ಮಾಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next