Advertisement

Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್‌ ಆದೇಶ

08:41 PM Dec 16, 2024 | Team Udayavani |

ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

Advertisement

ವಿಚಾರಣೆ ನಡೆಸಿ “ನನ್ನ ವಾದ ಆಲಿಸದೆ 10 ಸಾವಿರ ದಂಡ ಹಾಕಲಾಗಿದೆ’ ಎಂದು ಆಕ್ಷೇಪಿಸಿ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಮತ್ತು ಸಿಪಿಐಒ (ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ) ಸಿ.ಪುಷ್ಪಲತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 10 ಸಾವಿರ ದಂಡವನ್ನು ನಿಮ್ಮ ಸಂಬಳದ ಮೊತ್ತದಿಂದ ಪಾವತಿ ಮಾಡಬೇಕು’ ಎಂದು ಪುಷ್ಪಲತಾ ಅವರಿಗೆ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಇದೇ ವೇಳೆ ನ್ಯಾಯಪೀಠ ರದ್ದುಪಡಿಸಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next