Advertisement
ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರಕಾರ ಉತ್ತರ ಕೊಡಬೇಕು ಎಂದು ಪ್ರಶ್ನೆ ಎತ್ತಿದ್ದಾರೆ.
-ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ಸಹ ನಿರ್ಲಕ್ಷ್ಯ ಮಾಡಲಾಯಿತೇ?
-ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಏಕೆ ಭದ್ರತೆ ನೀಡಲಿಲ್ಲ?
-ಪಟ್ಟಣದಲ್ಲಿ ಇದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?
-ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿರುವ ಹೆಚ್ಚಿನ ಸಿಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?
-ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್ಐಆರ್ ನಲ್ಲಿ ಎ 1 ಮಾಡಿರುವುದೇಕೆ?
-ಎ 1 ನಿಂದ ಎ 23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್ ಐಆರ್ ಮಾಡಿ ಶನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ?
-ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?
-25 ಕೋಟಿ ರೂಪಾಯಿ ಮೊತ್ತದ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದ್ದರೂ, ಗೃಹ ಸಚಿವರಿಗೆ ಇದೊಂದು ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣ ಏನು?
– ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿ.ಮೀ. ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವರು ಇನ್ನೂ ಭೇಟಿ ನೀಡಿಲ್ಲವೇಕೆ? ಬಿಜೆಪಿ ಸತ್ಯಶೋಧನ ಸಮಿತಿ ರಚನೆ
ಬೆಂಗಳೂರು: ನಾಗಮಂಗಲ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಡಿಸಿಎಂ ಡಾ| ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನ ಸಮಿತಿಯನ್ನು ರಚನೆ ಮಾಡಿದೆ. ಈ ಸಮಿತಿಯಲ್ಲಿ ಮಾಜಿ ಸಚಿವರಾದ ಬೈರತಿ ಬಸವರಾಜ, ಕೆ.ಸಿ. ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸದಸ್ಯರಾಗಿದ್ದಾರೆ.
Related Articles
Advertisement