Advertisement

ದೇಶದಲ್ಲೇ ಮೂರು ಕೈಗಾರಿಕಾ ಕಾರಿಡಾರ್ ಗಳನ್ನು ಹೊಂದಿದ ಏಕೈಕ ರಾಜ್ಯ ಕರ್ನಾಟಕ: ಸಚಿವ ನಿರಾಣಿ

02:05 PM Sep 23, 2021 | Team Udayavani |

ಬೆಂಗಳೂರು: ಕರ್ನಾಟಕವು ಜಾಗತಿಕ ಹೂಡಿಕೆದಾರರಿಗೆ ಅತ್ಯುತ್ತಮ ತಾಣವಾಗಿದ್ದು, ದೇಶದಲ್ಲೇ ಮೂರು ಕೈಗಾರಿಕಾ ‌ಕಾರಿಡಾರ್ ಗಳನ್ನು ‌ಹೊಂದಿದ ಏಕೈಕ ರಾಜ್ಯವಾಗಿದೆ ಎಂದು ‌ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

Advertisement

ಗುರುವಾರ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಕೆಐಎಡಿಬಿ ಆಯೋಜಿಸಿದ್ದ ಭಾರತದ 75 ನೇ ಸ್ವಾತಂತ್ರ್ಯವದ ಸವಿನೆನಪಿಗಾಗಿ ಸಪ್ತಾಹದ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಹೂಡಿಕೆ ಮಾಡುವ ಜಾಗತಿಕ ಉದ್ಯಮಿಗಳಿಗೆ ಕರ್ನಾಟಕ ಯಾವಾಗಲೂ ಅತ್ಯುತ್ತಮ ತಾಣವಾಗಿದೆ. ಏಕೆಂದರೆ ನಾವು ಇಲ್ಲಿಗೆ ಬರುವ ಉದ್ಯಮಿಗಳಿಗೆ ಅತ್ಯುತ್ತಮವಾದ ಹಾಗೂ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿದ್ದೇವೆ ಎಂದು ಇಲ್ಲಿರುವ ಅವಕಾಶಗಳನ್ನು ತೆರೆದಿಟ್ಟರು.

“ಭಾರತದ ಮೂರು ಮಹಾನಗರಗಳೊಂದಿಗೆ ಬೆಂಗಳೂರನ್ನು ಸಂಪರ್ಕಿಸುವ ಮೂರು ಪ್ರಮುಖ ಕೈಗಾರಿಕಾ ಕಾರಿಡಾರ್‌ಗಳನ್ನು ಹೊಂದಿರುವ ಏಕೈಕ ರಾಜ್ಯವೆಂದರೆ ಕರ್ನಾಟಕ. ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ (CBIC), ಬೆಂಗಳೂರು-ಮುಂಬೈ ಆರ್ಥಿಕ ಕಾರಿಡಾರ್ (BMEC) ಮತ್ತು ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ (HBIC) ಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ನಿಗಮ ಲಿಮಿಟೆಡ್ (NICDC) ಅಭಿವೃದ್ಧಿಪಡಿಸುತ್ತಿದೆ ಎಂದು ಹೇಳಿದರು.

ಕೈಗಾರಿಕಾ ವಲಯದಲ್ಲಿ ರಾಜ್ಯವು ಸಾಧಿಸಿರುವ ಪ್ರಗತಿಯನ್ನು ವಿವರಿಸಿದ ಅವರು, ಆಡಳಿತ ನಡೆಸಿರುವ ಸರ್ಕಾರಗಳು ದೇಶದಲ್ಲೇ  ಕರ್ನಾಟಕವನ್ನು ನಂ .1 ಸ್ಥಾನಕ್ಕೆ ‌ಕೊಂಡುಯ್ಯದು ಹೂಡಿಕೆದಾರ ಸ್ನೇಹಿ ರಾಜ್ಯವನ್ನಾಗಿ ಮಾಡಲು ಶ್ರಮಿಸಿದ್ದಾರೆ  ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಇದನ್ನೂ ಓದಿ:ಸಾರ್ಕ್ ಸಭೆಗೆ ತಾಲಿಬಾನ್ ಗೆ ಆಹ್ವಾನ ನೀಡಿ; ಪಾಕ್ ಪಟ್ಟು, ಭಾರತವನ್ನು ಕೆಣಕಿದ ಟರ್ಕಿ

“ಕರ್ನಾಟಕವು ಪ್ರಮುಖ ಉದ್ಯಮಗಳಿಗೆ ಆದ್ಯತೆಯ ತಾಣವಾಗಿ ಮಾರ್ಪಟ್ಟಿದೆ. ಏಕೆಂದರೆ ಇದು ವೆಚ್ಚದ ಸ್ಪರ್ಧಾತ್ಮಕ ಉತ್ಪಾದನಾ ವಾತಾವರಣವನ್ನು ಒದಗಿಸುತ್ತದೆ. ಕಳೆದ ದಶಕದಲ್ಲಿ 7.09 % ಜಿಎಸ್ ಡಿಪಿ ಯೊಂದಿಗೆ ಕರ್ನಾಟಕವು ಭಾರತದ 4 ನೇ ಅತಿದೊಡ್ಡ ಆರ್ಥಿಕತೆಯ ರಾಜ್ಯವಾಗಿ ಹೊರಹೊಮ್ಮುತ್ತಿದೆ. 2020- 21 ನೇ ಸಾಲಿನ ಮೊದಲ ‌ತ್ರೈಮಾಸಿಕ ಅವಧಿಯಲ್ಲಿ ದೇಶದಲ್ಲೇ ‘ವಿದೇಶಿ ನೇರ ಬಂಡವಾಳ ಹೂಡಿಕೆ’ ಯಲ್ಲಿ ನಾವು ಮೊದಲ ಸ್ಥಾನದಲ್ಲಿದ್ದೇವೆ. ಇದರಿಂದಾಗಿ ರಾಜ್ಯದಲ್ಲಿ ಇನ್ನಷ್ಟು ದೊಡ್ಡ ‌ದೊಡ್ಡ ಉದ್ಯಮಿಗಳು ಹೂಡಿಕೆ ಮಾಡಲು ಮುಂದೆ ಬರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ,ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಡಾ.ಎನ್. ಶಿವಶಂಕರ್, ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next