Advertisement

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

12:14 AM Dec 24, 2024 | Team Udayavani |

ಬೆಂಗಳೂರು: ಮುಂಬರುವ 2025ನೇ ಸಾಲಿನ “ಕರ್ನಾಟಕ ಕ್ರೀಡಾಕೂಟ’ಕ್ಕೆ ಕರಾವಳಿ ಸಾಕ್ಷಿಯಾಗ ಲಿದ್ದು, ಇದಕ್ಕಾಗಿ ಈಗಿನಿಂದಲೇ ಸರಕಾರ ಭರದ ಸಿದ್ಧತೆಗಳನ್ನು ಆರಂಭಿಸಿದೆ.

Advertisement

ಜ. 17ರಿಂದ 23ರ ವರೆಗೆ ಮಂಗ ಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.

ಕ್ರೀಡಾಕೂಟದಲ್ಲಿ 3,750 ಕ್ರೀಡಾ ಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಮಂದಿ ಭಾಗವಹಿಸಲಿದ್ದು, ಊಟ-ತಿಂಡಿ, ವಸತಿ, ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕ ಟ್ಟಾಗಿ ನಿರ್ವಹಿಸಬೇಕು.

ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲದಲ್ಲಿ 11 ಕ್ರೀಡೆ ಗಳು ಆಯೋಜನೆಗೊಳ್ಳಲಿದ್ದು, ಶೂಟಿಂಗ್‌ ಮತ್ತು ಜಿಮ್ನಾಸ್ಟಿಕ್‌ ಕ್ರೀಡೆಗ ಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾ ಗುವುದು ಎಂದು ವಿವರಿಸಿದರು.

ಮಂಗಳೂರಿನಲ್ಲಿ ಜ. 17ರಂದು ಕರ್ನಾಟಕ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಉಡುಪಿಯಲ್ಲಿ ನಡೆಯಲಿರುವ ಸಮಾರೋಪದಲ್ಲಿ ಡಾ| ಜಿ. ಪರಮೇಶ್ವರ್‌ ಭಾಗವಹಿಸಲಿದ್ದಾರೆ.

Advertisement

ಲಾಂಛನ ಬಿಡುಗಡೆ
“ಕರ್ನಾಟಕ ಕ್ರೀಡಾಕೂಟ- 2025’ರ ಲಾಂಛನವನ್ನು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಕ್ರೀಡಾಕೂಟದ ಲಾಂಛನದಲ್ಲಿ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆ ಜತೆಗೆ ಸೋಲು-ಗೆಲುವುಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವಂತಿದೆ.

Advertisement

Udayavani is now on Telegram. Click here to join our channel and stay updated with the latest news.

Next