ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆದಿನವಾದ ಮಂಗಳವಾರ ಜೆಡಿಎಸ್ ಅಭ್ಯರ್ಥಿಯಾಗಿ ಮೇಲ್ಮನೆಯ ಮಾಜಿ ಸದಸ್ಯ ಟಿ.ಎ.ಶರವಣ ಹೆಸರು ಘೋಷಿಸಲಾಯಿತು.
ನಂತರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಜತೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ,ಸಣ್ಣ ಪ್ರಮಾಣದ ಅರ್ಯ ವೈಶ್ಯ ಸಮುದಾಯದ ಶರವಣ ಅವರಿಗೆ ಟಿಕೆಟ್ ನೀಡಿದ್ದೇವೆ. ಮಾಜಿ ಪ್ರಧಾನಿ ದೇವೇಗೌಡರ ಸೂಚನೆಯ ಮೇರೆಗೆ ಅವಕಾಶ ನೀಡಿದ್ದೇವೆ ಎಂದು ಹೇಳಿದರು.
ಶರವಣ ಅವರು ಪಕ್ಷಕ್ಕೆ ದುಡಿದಿದ್ದಾರೆ. ಪಕ್ಷದ ಎಲ್ಲ ಆಗುಹೋಗುಗಳಿಗೆ ಸ್ಪಂದಿಸಿದ್ದಾರೆ.ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಸವನಗುಡಿ, ಚಿಕ್ಕಪೇಟೆ ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸುವ ಟಾಸ್ಕ್ ಅವರಿಗೆ ನೀಡಿದ್ದೇವೆ ಎಂದು ತಿಳಿಸಿದರು.
ಧನ್ಯವಾದ ಹೇಳಿದ ಶರವಣ
ಟಿ.ಎ.ಶರವಣ ಮಾತನಾಡಿ, ಪಕ್ಷ ನಿಷ್ಠೆಯನ್ನು ಗಮನಿಸಿ ಎರಡನೇ ಬಾರಿ ವಿಧಾನ ಪರಿಷತ್ ನಲ್ಲಿ ಸೇವೆ ಸಲ್ಲಿಸಲು ವರಿಷ್ಠರು ಅವಕಾಶ ಕೊಟ್ಟಿದ್ದಾaರೆ. ದೇವೇಗೌಡರಿಗೆ, ಕುಮಾರಸ್ವಾಮಿ ಅವರಿಗೆ ಹಾಗೂ ಪಕ್ಷದ ಶಾಸಕರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.