Advertisement

ಉಡುಪಿ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಎಷ್ಟು…ಫಲಿತಾಂಶದ ವಿವರ ಇಲ್ಲಿದೆ

11:24 AM Sep 03, 2018 | Team Udayavani |

ಉಡುಪಿ: ಉಡುಪಿ ಜಿಲ್ಲೆಯ ಉಡುಪಿ ನಗರಸಭೆ, ಕಾರ್ಕಳ ಪುರಸಭೆ, ಕುಂದಾಪುರ ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯ್ತಿಯ ಒಟ್ಟು 97 ವಾರ್ಡ್ ಗಳಲ್ಲಿ ಬಿಜೆಪಿ 66 ವಾರ್ಡ್ ಗಳಲ್ಲಿ ಜಯಭೇರಿ ಬಾರಿಸಿದರೆ, ಕಾಂಗ್ರೆಸ್ 28 ವಾರ್ಡ್ ಗಳಲ್ಲಿ ಗೆದ್ದು ಮುಖಭಂಗ ಅನುಭವಿಸಿದೆ. ಮೂರು ಪಕ್ಷೇತರರು ಜಯಗಳಿಸಿದ್ದಾರೆ.

Advertisement

ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಸೋಮವಾರ ಬಹುತೇಕ ಹೊರಬಿದ್ದಿದ್ದು, ಉಡುಪಿ ನಗರಸಭೆಯಲ್ಲಿ ಬಿಜೆಪಿ ಮತ್ತೆ ತನ್ನ ಪ್ರಾಬಲ್ಯ ಸಾಧಿಸಿದೆ. ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದೆ.

ಉಡುಪಿ ನಗರಸಭೆಯ 35 ವಾರ್ಡ್ ಗಳಲ್ಲಿ ಭಾರತೀಯ ಜನತಾ ಪಕ್ಷ 31 ವಾರ್ಡ್ ಗಳಲ್ಲಿ ಹಾಗೂ ಕಾಂಗ್ರೆಸ್ ಕೇವಲ 4 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ. ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಕುಂದಾಪುರ ಪುರಸಭೆ ಬಿಜೆಪಿ ತೆಕ್ಕೆಗೆ:

23 ವಾರ್ಡ್ ಗಳ ಕುಂದಾಪುರ ಪುರಸಭೆಯಲ್ಲಿ ಬಿಜೆಪಿ 14 ವಾರ್ಡ್ ಗಳಲ್ಲಿ, ಕಾಂಗ್ರೆಸ್ 8 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

Advertisement

ವಿಜಯೋತ್ಸವಕ್ಕೆ ಅವಕಾಶವಿಲ್ಲ:

ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆಯೇ ವಿಜಯೋತ್ಸವಕ್ಕೆ ಸಿದ್ದರಾದ ಬಿಜೆಪಿ ಕಾರ್ಯಕರ್ತರಿಗೆ ಸಂಭ್ರಮಾಚರಣೆಯಲ್ಲಿ ತೊಡಗದಂತೆ ಕುಂದಾಪುರ ಡಿವೈಎಸ್ಪಿ ಸೂಚನೆ ನೀಡಿದ್ದಾರೆ.

ಕಾರ್ಕಳ ಪುರಸಭೆ ಅತಂತ್ರ:

23 ವಾರ್ಡ್ ಗಳ ಕಾರ್ಕಳ ಪುರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಅದು ಕೇವಲ ಒಂದು ಸ್ಥಾನದಿಂದಾಗಿ. ಬಿಜೆಪಿ 11 ಹಾಗೂ ಕಾಂಗ್ರೆಸ್ 11 ವಾರ್ಡ್ ಗಳಲ್ಲಿ ಗೆಲುವು ಸಾಧಿಸುವ ಮೂಲಕ ಸಮಬಲ ಸಾಧಿಸಿದ್ದು, ಒಬ್ಬರು ಪಕ್ಷೇತರರು ಜಯ ಸಾಧಿಸಿದ್ದಾರೆ.

ಸಾಲಿಗ್ರಾಮ ಪಟ್ಟಣ ಪಂಚಾಯ್ತಿ ಬಿಜೆಪಿ ವಶಕ್ಕೆ:

ಸಾಲಿಗ್ರಾಮ ಪಟ್ಟಣ ಪಂಚಾಯ್ತಿ ಬಿಜೆಪಿ ತೆಕ್ಕೆಗೆ ಬಿದ್ದಿದ್ದು, ಬಿಜೆಪಿ 10 ವಾರ್ಡ್ ಗಳಲ್ಲಿ, ಕಾಂಗ್ರೆಸ್ 5 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ವಾರ್ಡ್ ನಲ್ಲಿ ಜಯ ಸಾಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next