Advertisement
ಈ ಚುನಾವಣೆ ಮೈತ್ರಿ ಸರ್ಕಾರದ “ಮೌಲ್ಯಮಾಪನ’ ಎಂದು ವಿಶ್ಲೇಷಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ದೋಸ್ತಿ ಮಾಡಿಕೊಂಡು ಅಧಿಕಾರ ಹಿಡಿದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಸ್ಥಳೀಯ ಮಟ್ಟದಲ್ಲಿ ಪರಸ್ಪರ ಕಾದಾಟಕ್ಕೆ ಇಳಿದಿವೆ. ಸಮ್ಮಿಶ್ರ ಸರ್ಕಾರವನ್ನು ಮಣಿಸಲು ಬಿಜೆಪಿ ರಣತಂತ್ರ ರೂಪಿಸಿದೆ. ಒಟ್ಟಿನಲ್ಲಿ ಮೂರು ರಾಜಕೀಯ ಪಕ್ಷಗಳು ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೆಚ್ಚು ಸ್ಥಳೀಯ ಸಂಸ್ಥೆಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿವೆ.
ಒಟ್ಟು ಸ್ಥಳೀಯ ಸಂಸ್ಥೆಗಳು: 105
ಮಹಾನಗರ ಪಾಲಿಕೆಗಳು: 3
ನಗರಸಭೆ:29
ಪುರಸಭೆ: 53
ಪಟ್ಟಣ ಪಂ.: 20
ಒಟ್ಟು ವಾರ್ಡ್‌ಗಳು: 2,634
ಒಟ್ಟು ಮತಗಟ್ಟೆ: 3,800
ಒಟ್ಟು ಮತದಾರರು: 49.39 ಲಕ್ಷ
ಪುರುಷರು: 24.62 ಲಕ್ಷ
ಮಹಿಳೆಯರು: 24.75 ಲಕ್ಷ
ಇತರೆ: 507
ಇವಿಎಂಗಳ ಬಳಕೆ
ಬ್ಯಾಲೆಟ್ ಯೂನಿಟ್: 6,174
ಕಂಟ್ರೋಲ್ ಯೂನಿಟ್: 6,474
ಅವಿರೋಧ ಆಯ್ಕೆ – 27 ಸೆ.3ಕ್ಕೆ ಮತ ಎಣಿಕೆ
ಎಲ್ಲ 105 ನಗರ ಸ್ಥಳೀಯ ಸಂಸ್ಥೆಗಳ ಮತ ಎಣಿಕೆ ಕಾರ್ಯ ಸೆ.3ರಂದು ಬೆಳಿಗ್ಗೆ 8 ಗಂಟೆಯಿಂದ ನಡೆಯಲಿದೆ. ಮಹಾನಗರ ಪಾಲಿಕೆಗಳ ಮತ ಎಣಿಕೆ ಕಾರ್ಯ ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮತ ಎಣಿಕೆ ಕಾರ್ಯ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.
Related Articles
ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ, ಯಾದಗಿರಿ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಒಂದಕ್ಕೆ ಮಾತ್ರ ಚುನಾವಣೆ ನಡೆಯುತ್ತಿದೆ. ವಿಜಯಪುರ ಹಾಗೂ ಬೀದರ ಜಿಲ್ಲೆಗಳಲ್ಲಿ ಕೇವಲ ಒಂದೊಂದೇ ಪುರಸಭೆಗೆ ಚುನಾವಣೆ ನಡೆಯುತ್ತಿದೆ.
Advertisement
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲಿದೆ. ರಾಜ್ಯದಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಮತದಾರರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸುವುದರ ಜತೆಗೆ ಬಹುತೇಕ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳಲ್ಲಿ ಅಧಿಕಾರ ಹಿಡಿಯಲಿದೆ.– ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಕಾಂಗ್ರೆಸ್ ಪಕ್ಷವು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಬರಲಿದ್ದಾರೆ. ಮೊದಲಿನಿಂದಲೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡುತ್ತಲೇ ಬಂದಿದೆ. ನಮ್ಮ ಸಂಘಟನೆಯೂ ಉತ್ತಮವಾಗಿದೆ.
– ದಿನೇಶ್‌ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ