ಬೆಂಗಳೂರು: ರಾಜ್ಯದಲ್ಲಿ
ಕೋವಿಡ್-19 ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
ಮಾರ್ಚ್ 14ರಿಂದ ಶಾಲಾ ಕಾಲೇಜು, ಮಾಲ್ ಗಳು, ಚಿತ್ರಮಂದಿರ ಹೀಗೆ ಜನಸಂದಣಿ ಸೇರುವ ಸಮಾರಂಭಗಳನ್ನು ನಿರ್ಬಂಧಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದರು.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಆದೇಶವನ್ನು ಮಾರ್ಚ್ 31ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ವರದಿಯಾಗಿದೆ.
ಇದರೊಂದಿಗೆ ಸೋಂಕು ತಡೆಗೆ ನಾಲ್ಕು ಟಾಸ್ಕ್ ಫೋರ್ಸ್ ಗಳನ್ನು ರಚಿಸಲಾಗಿದೆ. ಡಾ. ಅಶ್ವಥ್ ನಾರಾಯಣ, ಶ್ರೀರಾಮುಲು, ಬಸವರಾಜ ಬೊಮ್ಮಾಯಿ ಮತ್ತು ಕೆ. ಸುಧಾಕರ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಗಳನ್ನು ರಚಿಸಲಾಗಿದೆ.
ಬೆಂಗಳೂರಿನಲ್ಲಿ ಇಂದು ಎರಡು ಹೊಸ ಪ್ರಕರಣಗಳು ಬೆಳಕಿಗೆ ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತ ಸಂಖ್ಯೆ 13ಕ್ಕೇರಿದೆ.