Advertisement

ಮೇ 10ರಿಂದ 14 ದಿನಗಳ ಕಾಲ ಕರುನಾಡು ಸ್ತಬ್ಧ: ಲಾಕ್ ಡೌನ್ ಆದೇಶ ಹೊರಡಿಸಿದ ಸಿಎಂ ಬಿಎಸ್ ವೈ

08:04 PM May 07, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.

Advertisement

ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆ  ಪ್ರಕಟಿಸಿದ್ದಾರೆ.  ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಈಗಾಗಲೇ ಮೇ 12ರವರೆಗೂ ಜನತಾ ಕರ್ಫ್ಯೂ ಜಾರಿಯಲ್ಲಿದೆ.  ಇದರಿಂದಲೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಾರದಿದ್ದರಿಂದ  ರಾಜ್ಯಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಮಾರ್ಗಸೂಚಿ:

  • ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಕಠಿಣ ಲಾಕ್​ಡೌನ್​
  •  ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ  10 ಗಂಟೆವರೆಗೆ ಮಾತ್ರ ಹಾಲು, ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ
  • ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ.
  • ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ತಳ್ಳುವ ಗಾಡಿಯಲ್ಲಿ ತರಕಾರಿ-ಹಣ್ಣುಗಳನ್ನು ಮಾರಲು ಅವಕಾಶ ನೀಡಲಾಗಿದೆ.
  • ಕೈಗಾರಿಕೆ ಹೊಟೇಲ್, ಪಬ್, ಬಾರ್ ಕ್ಲೋಸ್.ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.
  • ಸರ್ಕಾರಿ ಕಚೇರಿ ಭಾಗಶ‍ಃ ಕೆಲಸ ಮಾಡಲಿದೆ.
  • ಅಗತ್ಯವಸ್ತು ಸಾಗಿಸುವ ವಾಹನಗಳಿಗೆ ಅವಕಾಶವಿದೆ.
  • ಅಂತರ್ ಜಿಲ್ಲಾ ಸಂಚಾರಕ್ಕೆ ಸಂಪೂರ್ಣ ನಿಷೇಧ
  • ಮೇ 10 ರಿಂದ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳಿಗೆ ಬೀಗ
  • ವಿಮಾನ ರೈಲು ಸಂಚಾರಕ್ಕೆ ಅನುಮತಿ
  • ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆಗೆ ಮದ್ಯ ಮಾರಾಟಕ್ಕೆ ಅವಕಾಶ
  • ಟ್ಯಾಕ್ಸಿ, ಅಟೋ ತುರ್ತು ಸೇವೆಗಳಿಗೆ ಅವಕಾಶ
  • ಸಿನಿಮಾ, ಮಾಲ್, ಜಿಮ್ ಎಲ್ಲವೂ ಮೇ 24 ರವರೆಗೂ ಬಂದ್
  • ತುರ್ತು ವೈದ್ಯಕೀಯ ಸೇವೆ ಹೊರತು ಪಡಿಸಿ ಎಲ್ಲಾ ರೀತಿಯ ಸಂಚಾರಕ್ಕೆ ನಿರ್ಬಂಧವೇರಲಾಗಿದೆ.
  • ಎಲ್ಲ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.
  • ತಳ್ಳುಗಾಡಿಗಳಲ್ಲಿ ತರಕಾರಿ ಮಾರಲು ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶ
  • ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
  • ಕ್ರೀಡಾ ಸಮುಚ್ಛಯ, ಸಾರ್ವಜನಿಕ ಈಜುಕೊಳ ಸಂಪೂರ್ಣ ಬಂದ್
  • ಈಗಾಗಲೇ ನಿಗದಿಯಾಗಿದ್ದ ಮದುವೆಗಳಿಗೆ ಅವಕಾಶ
  • ಮದುವೆ ಸಮಾರಂಭಗಳಿಗೆ 50 ಜನರಿಗೆ ಮಾತ್ರ ಅವಕಾಶ
  • ರಸ್ತೆ ಕಾಮಗಾರಿಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.
  •  ಆಸ್ಪತ್ರೆಗಳು, ಮೆಡಿಕಲ್​ ಶಾಪ್​ಗಳು, ಬ್ಯಾಂಕ್​ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
  • ಯಾವುದೇ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರುವುದಿಲ್ಲ.
  • ಕೈಗಾರಿಕೆಗಳಿಗೆ ಷರತ್ತು ಬದ್ಧ ಅನುಮತಿ
  • ಇ- ಕಾಮರ್ಸ್  ಸೇವೆಗಳಿಗೆ ಅವಕಾಶ
  • ಹೊಟೇಲ್ ಗಳಿಂದ ಪಾರ್ಸೆಲ್ ತರಲು ಹೋಗಬೇಕಾದರೆ ನಡೆದುಕೊಂಡೆ ಹೋಗಬೇಕು. ವಾಹನಗಳಲ್ಲಿ ಹೋದರೆ ಶಿಕ್ಷೆ
  • ಅಗತ್ಯ ಸೇವೆಗಳಿಗೆ ಬಿಟ್ಟು ಅನವಶ್ಯಕವಾಗಿ ವಾಹನಗಳನ್ನು ಚಲಾಯಿಸುವಂತಿಲ್ಲ.
  • ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.
  • ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.
  • ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.
  • ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.
  •  ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next