ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು (ಶುಕ್ರವಾರ) ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ, ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ,
ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದ ಮತದಾನ ಆರಂಭವಾಗಿದ್ದು ಸಂಜೆ ೬ ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
ಕರ್ನಾಟಕ ಮಾತ್ರವಲ್ಲದೇ ಒಟ್ಟು 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಅಲ್ಲದೆ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ವ್ಯವಸ್ಥೆಯನ್ನು ಮಾಡಲಾಗಿದೆ.
ಕೆಲವೆಡೆ ಮತದಾನ ಆರಂಭಗೊಂಡ ಕೆಲವೇ ಹೊತ್ತಿನಲ್ಲಿ ಮತಯಂತ್ರ ಕೈಕೊಟ್ಟು ಮತದಾದಾರರು ಕಾಯುವ ಸ್ಥಿತಿ ಕಂಡುಬಂದಿದ್ದು, ಇನ್ನೂ ಕೆಲವೆಡೆ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ.