Advertisement

ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರಿಗೆ ಪಿತೃ ವಿಯೋಗ

10:40 PM Aug 10, 2022 | Team Udayavani |

ವಿಜಯಪುರ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್ ಅವರ ತಂದೆ ಸಂಗನಗೌಡ ಪಾಟೀಲ ಬುಧವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. 98 ವರ್ಷದ ಸಂಗನಗೌಡ ಪಾಟೀಲ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಬುಧವಾರ ರಾತ್ರಿ 8-45 ರ ಸುಮಾರಿಗೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಸ್ವಗ್ರಾಮ ಪಡೇಕನೂರು ನಿವಾಸದಲ್ಲಿ ವಿಧಿವಶರಾಗಿದ್ದಾರೆ.

Advertisement

ಮೃತರು ಪತ್ನಿ, ಪುತ್ರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹಾಗೂ ಇಬ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತ ಸಂಗನಗೌಡ ಅವರ ಅಂತ್ಯ ಕ್ರಿಯೆ ಆ.11 ರಂದು ಮಧ್ಯಾಹ್ನ 4 ಗಂಟೆಗೆ ಪಡೇಕನೂರ ಗ್ರಾಮದ ತೋಟದಲ್ಲಿ ನಡೆಯಲಿದೆ.ಸಂಗನಗೌಡ ಅವರ ಅಗಲಿಕೆಗೆ ನಾಡಿನವಿವಿಧ ಮಠಾಧೀಶರು, ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next