Advertisement

ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಜಗದೀಶ್ ಶೆಟ್ಟರ್

09:41 AM Feb 17, 2020 | keerthan |

ಬೆಳಗಾವಿ: ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದ ಮುಗಿದ ಅಧ್ಯಾಯ. ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಶಿವ ಸೇನೆಯು ಅನಗತ್ಯವಾಗಿ ಈ ವಿಷಯದಲ್ಲಿ ಖ್ಯಾತೆ ತೆಗೆಯುತಿದ್ದು, ಮಹಾಜನ್ ವರದಿಯೇ ಅಂತಿಮ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮತ್ತೊಮ್ಮೆ ಸ್ಪಷ್ಟಪಡಿಸಿದರು.

Advertisement

ಖಾನಾಪುರ ತಾಲೂಕಿನ ಬೋಗುರ ಗ್ರಾಮದಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟ 6 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಹಾರಾಷ್ಟ್ರದಲ್ಲಿ ತಮ್ಮ ರಾಜಕೀಯ ಲಾಭಕ್ಕಾಗಿ ಗಡಿವಿವಾದ ಕೆಣುತ್ತಿರುವ ಮಹಾ ಸರ್ಕಾರದ ನಡೆಗೆ ಯಾವುದೇ ಅರ್ಥವಿಲ್ಲ. ರಾಜ್ಯದ ಹಿತ ಕಾಪಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಬೀಳುವುದಿಲ್ಲ ಎಂದರು.‌

ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಹಾಗೂ ಯುವ ಜನತೆಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಇನ್ವೆಸ್ಟ್ ಕರ್ನಾಟಕ ಮೇಳ ಆಯೋಜಿಸಿ ಸಾವಿರಾರು ಕೋಟಿ ಬಂಡವಾಳದ ಉದ್ಯಮ ಆರಂಭಿಸಲು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಉದ್ಯಮಿಗಳನ್ನು ಆಹ್ವಾನಿಸಿ 10 ಸಾವಿರ ಕೋಟಿ ರೂ.ಗೂ ಅಧಿಕ ಹೂಡಿಕೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡಲ್ಲಿ ಇನ್ವೆಸ್ಟ್ ಕರ್ನಾಟಕ ಮೇಳ ಮಾಡಿದ್ದಕ್ಕೆ ಬೆಳಗಾವಿಯಲ್ಲಿ ಅಸಮಾಧಾನ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲಬಾರಿಗೆ ಉತ್ತರ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಉತ್ತೇಚನೆ ನೀಡಿರುವ ಬಗ್ಗೆ ಅಭಿಮಾನ ವ್ಯಕ್ತಪಡಿಸಬೇಕಿತ್ತು. ಈ ಮೇಳದಲ್ಲಿ ಹಾವೇರಿ, ದಾವಣಗೆರೆ, ಯಾದಗಿರಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉದ್ಯಮ ಆರಂಭಿಸಲು 50ಕ್ಕೂ ಹೆಚ್ಚು ಕಂಪನಿಗಳು ಮುಂದೆಬಂದಿವೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next