ಕಲ್ಯಾಣ್: ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್ ವತಿಯಿಂದ ವಾರ್ಷಿಕ ಗಣೇಶೋತ್ಸವವು ಸಂಘದ ಕಚೇರಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಸಂಘದ ಗೌರವಾಧ್ಯಕ್ಷ ಶ್ರೀಧರ ಪೂಜಾರಿ ಅವರ ಮಾರ್ಗ ದರ್ಶನದಲ್ಲಿ, ಅಧ್ಯಕ್ಷ ದಿವಾಕರ ಸಾಲ್ಯಾನ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.
ಅಧ್ಯಕ್ಷ ದಿವಾಕರ ಸಾಲ್ಯಾನ್ ಅವರು ಪ್ರತಿಷ್ಠಾಪನ ಪೂಜಾ ವಿಧಿ-ವಿಧಾನಗಳ ಯಜಮಾನಿಕೆ ವಹಿಸಿದ್ದರು. ಬಳಿಕ ಅಲಂಕಾರ ಪೂಜೆ, ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಜೆ 5ರಿಂದ ಸದಸ್ಯರು ಮತ್ತು ಮಹಿಳಾ ವಿಭಾಗದವರಿಂದ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಧನಂಜಯ ಪೂಜಾರಿ ಅವರಿಂದ ಮಹಾ ಮಂಗಳಾರತಿ, ರಾಜೇಶ್ ಪೂಜಾರಿ ಅವರಿಂದ ಸಾಮೂಹಿಕ ಪ್ರಾರ್ಥನೆ, ಪ್ರಸಾದ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ರಮೇಶ್ ಪೂಜಾರಿ, ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಕೋಶಾಧಿಕಾರಿ ಪ್ರಶಾಂತ್ ಪೂಜಾರಿ, ಜತೆ ಕಾರ್ಯದರ್ಶಿ ರಾಜೇಶ್ ಪೂಜಾರಿ, ಜತೆ ಕೋಶಾಧಿಕಾರಿ ಉದಯ ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಪೂಜಾರಿ, ಕಾರ್ಯದರ್ಶಿ ಪ್ರೀತಿ ಪೂಜಾರಿ, ಕೋಶಾಧಿಕಾರಿ ಸುಜಾತಾ ಕೋಟ್ಯಾನ್, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಶ್ರೀಮತಿ ಪೂಜಾರಿ ಹಾಗೂ ಸಂಘದ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಇದನ್ನೂ ಓದಿ:ವಾಣಿವಿಲಾಸ ಸಾಗರದಲ್ಲಿ 107 ಅಡಿ ನೀರು ಸಂಗ್ರಹ
ಶನಿವಾರ ಸಂಜೆ ಸಕಲ ವಿಧಿ-ವಿಧಾನಗಳೊಂದಿಗೆ ಉತ್ತರ ಪೂಜೆಯೊಂದಿಗೆ ಶ್ರೀ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಯುವ ವಿಭಾಗದ ಪ್ರತೀಕ್ ಪೂಜಾರಿ, ಲತೇಶ್, ಕಾರ್ತಿಕ್, ಧೀರಜ್ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಸಂಘದ ಅಧ್ಯಕ್ಷ ದಿವಾಕರ ಸಾಲ್ಯಾನ್ ಅವರು ಕೃತಜ್ಞತೆ ಸಲ್ಲಿಸಿ ಶುಭ ಹಾರೈಸಿದರು.