ಅನುಸರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
Advertisement
ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎರಡು ವಾರಗಳ ಹಿಂದೆ ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ ಮಾಡಿತ್ತು. ಕೇಂದ್ರ ಸರ್ಕಾರ ಅದನ್ನೇ ಅನುಸರಿಸಿದೆ. ಆದರೆ, 2014ರಲ್ಲಿ ಇದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಜಾರಿಗೆ ತಂದರೆ ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇದೆ ಎಂದು ಹೇಳಬಹುದು. ಕಳೆದ ಐದು ವರ್ಷದಲ್ಲಿ ಕರ್ನಾಟಕದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಉಳಿದ ರಾಜ್ಯಗಳಿಗೆ ಹೋಲಿಸಿದರೆ ತೀರಾ ಕಡಿಮೆ ಇದೆ ಎಂದು ಹೇಳಿದರು.