ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಥ ರೀತಿಯಲ್ಲಿ ಆಡಳಿತವನ್ನು ನಡೆಸಿದ್ದು, ದೇಶದಲ್ಲಿಯೇ ಕರ್ನಾಟಕ ಮಾದರಿ ರಾಜ್ಯವೆನ್ನುವ ಖ್ಯಾತಿಯನ್ನು ಗಳಿಸಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಯುವ ಕಾಂಗ್ರೆಸ್ ಘಟಕ ಬಣ್ಣಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ರಾಜ್ಯ ಕಾಂಗ್ರೆಸ್ ಸರ್ಕಾರ ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿ ವಿಶೇಷ ಪ್ಯಾಕೇಜನ್ನು ನೀಡಿದ್ದು, ಸುಮಾರು 200 ಕೋಟಿ ರೂ.ಗಳಲ್ಲಿ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯಾಗಿವೆ ಎಂದರು. ಪ್ರತಿವರ್ಷ 50 ಕೋಟಿ ರೂ. ರಸ್ತೆ ಅಭಿವೃದ್ಧಿಗಾಗಿ ಬಿಡುಗಡೆಯಾಗುತ್ತಿದ್ದು, ಹಲವು ಕಡೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಜನವರಿ 9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಯುವ ಕಾಂಗ್ರೆಸ್ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಗುವುದೆಂದು ತಿಳಿಸಿದರು. ಸಾಧನಾ ಸಮಾವೇಶದಲ್ಲಿ ಸುಮಾರು 15 ಸಾವಿರ ಮಂದಿ ಯುವಜನ ಪಾಲ್ಗೊಳ್ಳಲಿ ದ್ದಾರೆ ಎಂದು ಹನೀಫ್ ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿಯವ ರನ್ನು ಅದ್ದೂರಿ ಯಾಗಿ ಸ್ವಾಗತಿಸುವುದಕ್ಕಾಗಿ ಮತ್ತು ಸಮಾವೇಶವನ್ನು ಯಶಸ್ವಿಗೊಳಿಸು ವುದಕ್ಕಾಗಿ ವಲಯ ಕಾಂಗ್ರೆಸ್ ಮಟ್ಟದ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಹೂವಯ್ಯ, ಉಪಾಧ್ಯಕ್ಷ ಸಫುìದ್ದೀನ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದಾ ಮುದ್ದಪ್ಪ ಹಾಗೂ ಗೋಣಿಕೊಪ್ಪ ಉಪಾಧ್ಯಕ್ಷ ಅಂಕಿತ್ ಪೊನ್ನಪ್ಪ ಉಪಸ್ಥಿತರಿದ್ದರು.