Advertisement
ಮುಧೋಳ ತಾಲೂಕಿನ ತಿಮ್ಮಾಪುರದ ಮುಧೋಳ ಶ್ವಾನ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ|ಸುಶಾಂತ ಹಂಡಗೆ ಈ ವಿಷಯ ದೃಢಪಡಿಸಿದ್ದು, ಏ.25ರಂದು ಮುಧೋಳ ತಳಿಯ ಎರಡು ತಿಂಗಳ ವಯಸ್ಸಿನ ಎರಡು ಶ್ವಾನ ಮರಿಗಳನ್ನು ಕೇಂದ್ರದ ಎನ್‌ಎಸ್‌ಜಿ ಪಡೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಾರತದ ದೇಶೀಯ ತಳಿ ಹಾಗೂ ವಿದೇಶಿ ತಳಿಯ ಶ್ವಾನಗಳಿಗೆ ಹೋಲಿಸಿದರೆ ಮುಧೋಳ ಶ್ವಾನ ಹಲವು ವಿಶೇಷತೆ ಹೊಂದಿದೆ. ಅತ್ಯಂತ ತೆಳುವಾದ ಮೈಕಟ್ಟು (ಬೇರೆ ಶ್ವಾನಕ್ಕೆ ಹೋಲಿಸಿದರೆ ತೂಕದಲ್ಲಿ ಕಡಿಮೆ), ಗಂಟೆಗೆ 50 ಕಿಮೀ ಓಡಬಲ್ಲ, ಮೂರು ಕಿಮೀ ದೂರ (ಬೇರೆ ನಾಯಿಗಳು 1 ಕಿಮೀ ಮಾತ್ರ ಸಾಮರ್ಥ್ಯ ಹೊಂದಿವೆ)ದಿಂದಲೇ ವಾಸನೆ ಗುರುತಿಸಬಲ್ಲ ಸಾಮರ್ಥ್ಯ ಹೊಂದಿದೆ. ಬೇರೆ ಶ್ವಾನಗಳು 10ರಿಂದ 12 ವರ್ಷ ಆಯುಷ್ಯ ಹೊಂದಿದ್ದರೆ, ಮುಧೋಳ ಶ್ವಾನ 12ರಿಂದ 15 ವರ್ಷ ಆಯುಷ್ಯ ಹೊಂದಿದೆ. ಅತ್ಯಂತ ವಿರಳ ಹಾಗೂ ವಿಶೇಷವಾದ ಈ ಮೂಧೋಳ ಶ್ವಾನವನ್ನು ಬೇಟೆಯಾಡಲು ಬಳಸಲಾಗುತ್ತಿತ್ತು. ಇಂತಹ ವಿಶಿಷ್ಟ ಶ್ವಾನ ಸಂತತಿ ಉಳಿಸಿ-ಬೆಳೆಸುವ ಉದ್ದೇಶದಿಂದಲೇ 2007-08ರಲ್ಲಿ ಮುಧೋಳದಲ್ಲಿ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ.
Related Articles
Advertisement