Advertisement

ಆರೋಗ್ಯ ನೋಂದಣಿಗೆ ಚಿಂತನೆ: ಡಾ.ಸುಧಾಕರ್‌

12:42 AM May 05, 2020 | Sriram |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆರೋಗ್ಯ ನೋಂದಣಿ (ಹೆಲ್ತ್‌ ರಿಜಿಸ್ಟರ್‌) ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ತಿಳಿಸಿದರು.

Advertisement

ಹಲವು ದಿನಗಳಿಂದ ಬೆಂಗಳೂರಿನ ನಿವಾಸದಲ್ಲಿ ಕ್ವಾರಂಟೈನ್‌ನಲ್ಲಿದ್ದು ಸೋಮವಾರ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳ ಜತೆ ವೀಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಈ ವಿಷಯ ತಿಳಿಸಿದರು.

ಕಂದಾಯ ಇಲಾಖೆ ಮತ್ತು ಶಿಕ್ಷಕರು ಸೇರಿ ಇನ್ನು ಕೆಲವು ಇಲಾಖೆ ಅಧಿಕಾರಿಗಳ ಜತೆ ತಂಡ ರಚಿಸಿ ಜಿಲ್ಲೆಯ ಪ್ರತಿ ಮನೆಗೆ ಭೇಟಿ ನೀಡಿ ಆರೋಗ್ಯ ಸರ್ವೆ ಮಾಡ ಲಾಗುತ್ತದೆ. ಇದನ್ನು ಆಧಾರವಾಗಿಟ್ಟುಕೊಂಡು ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದುವರಿದ ದೇಶಗಳೂ ಆರೋಗ್ಯ ನೋಂದಣಿ ವ್ಯವಸ್ಥೆಯನ್ನು ಅಳವಡಿಸಿಕೊಂಡಿವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next