Advertisement
ರಾಜ್ಯದ ಆರೋಗ್ಯ ಸಾಧನೆಗಳನ್ನು ಹಂಚಿಕೊಂಡಿರುವ ಸಚಿವರು, ಆರೋಗ್ಯ ಆರೈಕೆ ವೃತ್ತಿಪರರ ನೋಂದಣಿ (ಎಚ್.ಪಿ.ಆರ್) ವಲಯದಲ್ಲಿ 28,643 ವೈದ್ಯರು ಮತ್ತು ದಾದಿಯರು ನೋಂದಣಿಯಾಗಿದ್ದು, ರಾಜ್ಯ ಮೊದಲ ಸ್ಥಾನದಲ್ಲಿದೆ. ಆರೋಗ್ಯ ಸೌಲಭ್ಯ ನೋಂದಣಿಯಡಿ (ಎಚ್.ಎಫ್.ಆರ್) ಕರ್ನಾಟಕ 2 ನೇ ಸ್ಥಾನದಲ್ಲಿದ್ದು, 27,244 ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
Related Articles
Advertisement
ಈ ಬೆಳವಣಿಗೆಯಿಂದಾಗಿ ಭೌತಿಕವಾಗಿ ಯಾವುದೇ ದಾಖಲೆಗಳನ್ನು ಸಾಗಿಸುವ ಅಗತ್ಯ ಕಂಡು ಬರುವುದಿಲ್ಲ. ಸಮ್ಮತಿ ಮೇರೆಗೆ ಸುದೀರ್ಘ ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಹೊಂದಬಹುದಾಗಿದೆ. ಎಬಿಡಿಎಂನ ಮೊದಲ ಪ್ರಮುಖ ಪ್ರಯೋಜನವಾಗಿ, ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (ಎನ್‌ಎಚ್‌ಎ) ಸಹಕಾರದೊಂದಿಗೆ ಇ-ಆಸ್ಪತ್ರೆಯಲ್ಲಿ ಸ್ಕ್ಯಾನ್ ಮತ್ತು ಶೇರ್ ಸೌಲಭ್ಯದ ಮೂಲಕ ವೇಗದ ಟ್ರ್ಯಾಕ್ ನಡಿ ಹೊರರೋಗಿ ವಿಭಾಗದ ನೋಂದಣಿ ಪ್ರಾರಂಭಿಸಲಾಗಿದೆ. ಇದರಿಂದ ಒಪಿಡಿ ನೋಂದಣಿಗಾಗಿ ಸರತಿಯಲ್ಲಿ ಕಾಯುವ ಸಮಯವನ್ನು ಕಡಿಮೆಯಾಗಿದೆ. ಆರೋಗ್ಯ ದಾಖಲೆಗಳ ಸಂಪರ್ಕವನ್ನು ಸಹ ಸುಗಮವಾಗಿದೆ. ಆಧಾರ್ ಮೂಲಕ ನಿಖರವಾದ ದತ್ತಾಂಶವನ್ನು ಇ-ಹಾಸ್ಪಿಟಲ್ ಪೋರ್ಟಲ್‌ನಲ್ಲಿ ನಮೂದಿಸುವುದರಿಂದ ನಕಲು ಮಾಡುವುದನ್ನು ತಡೆಯಬಹುದು ಎಂದು ವಿವರಿಸಿದ್ದಾರೆ.
ಈ ವ್ಯವಸ್ಥೆಯನ್ನು ಸಿ.ವಿ.ರಾಮನ್ ನಗರದ ಜನರಲ್ ಆಸ್ಪತ್ರೆಯಲ್ಲಿ ಇದೇ ವರ್ಷದ ಅಕ್ಟೋಬರ್ 27 ರಂದು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಇದೀಗ ರಾಜ್ಯದ 15 ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗಳು ಮತ್ತು ಹೆಚ್ಚಿನ ಒತ್ತಡ ಇರುವ ತಾಲ್ಲೂಕು ಆಸ್ಪತ್ರೆಗಳಲ್ಲಿ ಇದೇ ರೀತಿಯ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.