ಬೆಳಗಾವಿ: ಮನುಷ್ಯರ ಮೃತದೇಹಗಳ ಅಂತ್ಯಕ್ರಿಯೆಗೆ ಇರುವಂತೆಯೇ ಸಾಕು ನಾಯಿಗಳ ಅಂತ್ಯಕ್ರಿಯೆಗೆ ವಿದ್ಯುತ್ ಚಾಲಿತ ಚಿತಾಗಾರಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.
ಈ ನಿಟ್ಟಿನಲ್ಲಿ ನಗರದ ನಾಲ್ಕು ಕಡೆಗಳಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಸೂಚನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದರು.
ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ಕೇಳಿದ ಪ್ರಶ್ನೆಗೆ ಸಚಿವರು ಹೀಗೆ ಪ್ರತಿಕ್ರಿಯಿಸಿದರು.
ಪಶುಸಂಗೋಪನೆ ಇಲಾಖೆಯೊಂದಿಗೂ ಸಮನ್ವಯ ಸಾಧಿಸಿ, ಎಲ್ಲೆಲ್ಲಿ ಪಶುವೈದ್ಯಕೀಯ ಕ್ಲಿನಿಕ್ಗಳ ಹತ್ತಿರ ಜಾಗ ಲಭ್ಯವಿದ್ದರೆ ಅಲ್ಲಿಯೂ ಮಾಡಬಹುದು. ಒಟ್ಟಾರೆ ಈ ನಿಟ್ಟಿನಲ್ಲಿ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.