Advertisement
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿರುವ ಬಗ್ಗೆ ಹೆಚ್ಚಿನ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ರಾಜ್ಯದ ಕೆಲವು ನಾಯಕರು ಹೇಳಿಕೆ ನೀಡಿದ್ದಾರೆ.
Related Articles
ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅಥವಾ ಬೇರೆ ಯಾರೇ ಸಿಎಂ ಆಗಲಿ ನಮಗೆ ಬಹಳ ಖುಷಿ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ವಿಜಯನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗಲಿ ಎಂಬುದು ನನ್ನ ಆಶಯ. ಜೀವಂತ ಇರುವವರೆಗೂ ದಲಿತ ಸಿಎಂ ಆಗಬೇಕೆಂದು ಹೋರಾಟ ಮಾಡುವೆ. ಈ ವಿಚಾರದಲ್ಲಿ ನಾನು ಬಿಜೆಪಿಯಲ್ಲೂ ಪ್ರಶ್ನೆ ಮಾಡುವೆ, ಸುಮ್ಮನಿರಲ್ಲ ಎಂದು ಹೇಳಿದ್ದಾರೆ.
Advertisement
ಸಿಎಂ ಬದಲಾವಣೆ ಕೇವಲ ಊಹಾಪೋಹ: ಸಿದ್ದುಸಿಎಂ ಬದಲಾವಣೆ ವಿಚಾರ ಕೇವಲ ಊಹಾಪೋಹ. ಸುಳ್ಳು ಆರೋಪಗಳಿಗೆ ನಾವು ಉತ್ತರ ಕೊಡಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಅವರು ಮಾತನಾಡಿ, ಸಚಿವ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷರನ್ನು ಅಥವಾ ಭೋಸರಾಜು ಇನ್ಯಾರನ್ನೋ ಭೇಟಿ ಮಾಡಿದರೆ ಚರ್ಚೆ ನಡೆಯುತ್ತದೆ. ಭೇಟಿ ಮಾಡಿದಾಕ್ಷಣ ಏನೋ ಆಗುತ್ತದೆಯಂತಲ್ಲ ಎಂದರು. ವಿಪಕ್ಷ ನಾಯಕ ಆರ್. ಅಶೋಕ್ ರಾಜೀನಾಮೆ ಕೊಡುವುದಿದ್ದರೆ ಕೊಡಲಿ. ನಾನು ತಪ್ಪು ಮಾಡಿದ್ದರೆ ಹೆದರಿಕೊಳ್ಳುತ್ತೇನೆ. ನಾನು ತಪ್ಪು ಮಾಡಿದ್ದೇನೆ ಎಂದು ಯಾರಾದರೂ ಹೇಳಿದ್ದಾರಾ? ತಪ್ಪೇ ಮಾಡಿಲ್ಲ ಎಂದ ಮೇಲೆ ಯಾರಿಗೂ ಭಯಪಡುವ ಅಗತ್ಯವಿಲ್ಲ. ಬಿಜೆಪಿಯವರಿಗೂ, ಜೆಡಿಎಸ್‌ನವರಿಗೂ ಭಯ ಪಡುವುದಿಲ್ಲ ಎಂದರು. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾಕರ ಸ್ವಾಭಿಮಾನ ಹೆಚ್ಚಾಗಬೇಕು ಎಂದು ಮಾನ್ವಿಯಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲಾಗಿದೆ. ಯಾರ ಸ್ವಾಭಿಮಾನಕ್ಕೂ ಧಕ್ಕೆಯಾಗಿಲ್ಲ ಎಂದರು.