ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಬಗೆಹರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚನೆ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿದೆ. ಇದೀಗ ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.
Advertisement
ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಪರಮೇಶ್ವರ್, ಸರ್ಕಾರ ರಚನೆ ಬಗ್ಗೆ ಅಧಿಕೃತವಾಗಿ ಮಾಹಿತಿ ತಲುಪಿಸಿದ್ದಾರೆ.
ಇದನ್ನೂ ಓದಿ:“ಪಕ್ಷಕ್ಕಾಗಿ ಒಪ್ಪಿಕೊಂಡೆ…”: DCM ಹುದ್ದೆಯ ಬಗ್ಗೆ ಡಿಕೆ ಶಿವಕುಮಾರ್ ಮಾತು
ಸರ್ಕಾರ ರಚನೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ. ಮೇ.20 ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ.