ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಕರಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ತಮ್ಮ ಬೆಂಬಲ ಬೆಂಬಲಿಗರೊಂದಿಗೆ ಆಗಮಿಸಿ ಕೊಪ್ಪಳದ ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಹೈಕಮಾಂಡ್ ನನಗೆ ಈ ಬಾರಿ ಅವಕಾಶ ಕಲ್ಪಿಸಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳಾ ಪ್ರತಿನಿಧಿಯಾಗಿ ಪಕ್ಷವು ನನಗೆ ಅವಕಾಶ ಕಲ್ಪಿಸಿದೆ ಎಂದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಅಭಿವೃದ್ಧಿ ಮಾಡುವುದು ನನ್ನ ಮೊದಲ ಆದ್ಯತೆಯಾಗಿದ್ದು ಸಿಂಗಟಾಲೂರು ಏತ ನೀರಾವರಿ ಜಾರಿ ನಮ್ಮ ಮೊದಲ ಆದ್ಯತರಯಾಗಿದೆ ಹಾಗೂ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಈಗಾಗಲೇ ನಮ್ಮ ಮಾವನವರಾದ ಸಂಸದ ಸಂಗಣ್ಣ ಕರಡಿಯವರು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ.
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಳಿನ್ ಕುಮಾರ್ ಕಟೀಲ್ ಅವರು ಸೇರಿದಂತೆ ಹಲವು ರಾಜ್ಯ ನಾಯಕರ ಅಭಿವೃದ್ಧಿ ಕಾರ್ಯ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಹಾಗೂ ನಮ್ಮ ಮುಂದಿನ ಯೋಜನೆಗಳನ್ನು ನೋಡಿ ಕ್ಷೇತ್ರದ ಮತದಾರರು ನನಗೆ ಮತ ನೀಡುವಂತೆ ಮನವಿ ಮಾಡುವೆ ಎಂದರು.
ಸಂಸದ ಸಂಗಣ್ಣ ಕರಡಿಯವರು ಸಂಸದರಾಗಿರುವುದರಿಂದ ಅವರು ಜಿಲ್ಲೆಯ ಐದು ಕ್ಷೇತ್ರಗಳಿಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಬೇಕಾಗಿದೆ. ಹಾಗಾಗಿ ಇಂದು ನಾಮಪತ್ರ ಸಲ್ಲಿಸುವ ವೇಳೆ ಗೈರಾಗಿದ್ದಾರೆ ಎಂದರು.