ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಂಬದಲ್ಲಿ ಬುಧವಾರ ಮುಂಜಾವ ಒಂದೂವರೆ ಗಂಟೆಯ ಸುಮಾರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು ಈ ವೇಳೆ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಸಹಿತ ಹಲವರು ಗಾಯಗೊಂಡಿದ್ದಾರೆ.
Advertisement
ಎರಡು ಕಡೆಯವರು ಕೂಡ ಪರಸ್ಪರ ದೂರು ನೀಡಿದ್ದು ಕೊಲೆಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾವಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.