Advertisement

Puneeth Kerehalli arrested; ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಪೊಲೀಸರ ಬಲೆಗೆ

04:02 PM Apr 05, 2023 | Team Udayavani |

ರಾಮನಗರ: ಅಕ್ರಮ ಗೋ ಸಾಗಾಣಿಕೆ ವೇಳೆ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಸಾವಿನ ಪ್ರಕರಣದ ಆರೋಪಿಯಾಗಿ ಪರಾರಿಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿ ಐವರನ್ನು ಸಾತನೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.

Advertisement

ಮಾರ್ಚ್ 31 ರಂದು ಕನಕಪುರದ ಸಾತನೂರು ಬಳಿ, ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಗೋವುಗಳನ್ನು ಸಾಗಿಸಲಾಗುತ್ತಿದ್ದ ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಈ ವೇಳೆ ಕ್ಯಾಂಟರ್‌ನಲ್ಲಿದ್ದ ಮಂಡ್ಯ ಮೂಲದ ಇದ್ರಿಸ್ ಪಾಷಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.

ಪ್ರಕರಣ ದಾಖಲಾದ ಬಳಿಕ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ತಲೆ ಮರೆಸಿಕೊಂಡಿದ್ದರು.ಆರೋಪಿಗಳನ್ನು ಬಂಧಿಸಲು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ನಾಲ್ಕು ತಂಡಗಳನ್ನು ರಚಿಸಿದ್ದರು.

ಬಂಧಿತ ಆರೋಪಿಗಳನ್ನು ರಾಮನಗರಕ್ಕೆ ಕರೆತರಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next