Advertisement

ಅನ್ಯ ಭಾಷಿಕರೊಂದಿಗೆ ಕನ್ನಡದಲ್ಲೇ ವ್ಯವಹರಿಸಿ

02:41 PM Nov 02, 2022 | Team Udayavani |

ದೇವನಹಳ್ಳಿ: ಕನ್ನಡ ಭಾಷೆಯ ಶ್ರೀಮಂತ ಗೊಳಿಸುವಿಕೆಯೊಂದಿಗೆ ಸಾಹಿತ್ಯ, ಸಂಸ್ಕೃತಿಯ ಪರಂಪರೆಯನ್ನು ಕನ್ನಡ ಇತಿಹಾಸ ಸಾರಿಹೇಳುತ್ತದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಡಳಿತದಿಂದ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅನ್ಯ ಭಾಷಿಕರೊಂದಿಗೆ ಕನ್ನಡದಲ್ಲಿ ವ್ಯವಹರಿಸಬೇಕು. ಹೊರ ರಾಜ್ಯಗಳಿಂದ ಬರುವ ಜನರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು. ಇತ್ತೀ ಚೆಗಿನ ದಿನಗಳಲ್ಲಿ ಆಂಗ್ಲ ವ್ಯಾಮೋಹದಿಂದ ಕನ್ನಡ ಭಾಷೆ ಕುಂಠಿತವಾಗುತ್ತಿದೆ. ಕನ್ನಡ ಏಕೀಕರಣಕ್ಕಾಗಿ ಹೋರಾಡಿದ ಮಹಾನೀಯರನ್ನು ಸ್ಮರಿಸಬೇಕು. ಕನ್ನಡ ಭಾಷೆ ಉಳಿಸಿ ಬೆಳೆಸಲು ಪ್ರತಿಯೊಬ್ಬರು ಬದ್ಧರಾಗಬೇಕು. ಕನ್ನಡ ಭಾಷೆ ತನ್ನದೇ ಆದ ಭವ್ಯ ಇತಿಹಾಸ ಹೊಂದಿದೆ. ನಮ್ಮ ಸಾಹಿತ್ಯ ಇತರರೆಲ್ಲಾ ಭಾಷೆಗಿಂತಲೂ ಶ್ರೀಮಂತವಾಗಿದೆ ಎಂದರು.

ಜಿಲ್ಲಾಧಿಕಾರಿ ಕಚೇರಿ ಸಹಾಯಕ ತಹಶೀಲ್ದಾರ್‌ ಬಾಲಕೃಷ್ಣ ಮಾತನಾಡಿ, ಭಾರತೀಯ ಸಾಹಿತ್ಯ ಪರಂಪರೆಗೆ ಕನ್ನಡ ಭಾಷೆ ಕೊಡುಗೆ ಅಪಾರ. ಅತ್ಯಂತ ಮಹತ್ವ ಪೂರ್ಣವಾಗಿದೆ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಕಂಠ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯೇಂದ್ರ, ನಗರಾಭಿವೃದ್ಧಿ ಕೋಶ ನಿರ್ದೇಶಕಿ ಶಾಲಿನಿ, ವಿಶ್ವನಾಥಪುರ ಇನ್ಸ್‌ ಪೆಕ್ಟರ್‌ ನಾಗರಾಜ್‌ ಅಂಬಿಗರ್‌, ನಿರ್ಮಿತಿ ಕೇಂದ್ರದ ಎಂಜಿನಿಯರ್‌ ರುದ್ರಸ್ವಾಮಿ, ಪಶು ಪಾಲನಾ ಇಲಾಖೆ ಉಪನಿರ್ದೇಶಕ ಡಾ.ನಾಗರಾಜ್‌, ಜಿಲ್ಲಾಧಿಕಾರಿ ಕಚೇರಿಯ ಆರ್‌.ಎಚ್‌.ಎ

Advertisement

Udayavani is now on Telegram. Click here to join our channel and stay updated with the latest news.

Next