Advertisement

Karnataka Rajyotsava;ಕುಂದಾನಗರಿಯಲ್ಲಿ ಕನ್ನಡ ಜಾತ್ರೆಯ ವೈಭವ ಸಂಭ್ರಮ

05:12 PM Nov 01, 2023 | |

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕಣ್ಣು ಹಾಯಿಸಿದಲ್ಲೆಲ್ಲ ಕನ್ನಡ ಮನಸ್ಸುಗಳ ಸಂಭ್ರಮ ಮನೆ ಮಾಡಿದೆ. ಬುಧವಾರ ಕರ್ನಾಟಕ ರಾಜ್ಯೋತ್ಸವದಂದು ಕನ್ನಡಿಗರ ಸಂಭ್ರಮಕ್ಕೆ ಪಾರವೇ ಇಲ್ಲ. ಇಡೀ ಬೆಳಗಾವಿ ಕನ್ನಡದ ಜಾತ್ರೆಯಾಗಿ ಮಾರ್ಪಟ್ಟಿದ್ದು, ತಾಯಿ ಭುವನೇಶ್ವರಿಯ ಕನ್ನಡದ ತೇರು ಎಳೆದ ಕನ್ನಡಿಗರು ಸಂಭ್ರಮದಲ್ಲಿ ತೇಲಾಡಿದರು.

Advertisement

ಬುಧವಾರ ಬೆಳಗ್ಗೆಯಿಂದಲೇ ನಗರದೆಲ್ಲೆಡೆ ಕನ್ನಡ ಹಬ್ಬದ ಸಹಸ್ರಾರು ಸಂಖ್ಯೆಯಲ್ಲಿ ಕನ್ನಡಿಗರು ಸಾಕ್ಷಿಯಾಗಿದ್ದಾರೆ. ನಗರದ ಕೇಂದ್ರ ಬಿಂದು ರಾಣಿ ಚನ್ನಮ್ಮ ವೃತ್ತದಲ್ಲಿ ಕನ್ನಡಿಗರ ಉತ್ಸಾಹ ಮೇರೆ ಮೀರಿದೆ. ಕೈಯಲ್ಲಿ ಹಳದಿ ಕೆಂಪು ಧ್ವಜ ಹಿಡಿದುಕೊಂಡು ಕುಣಿಯುತ್ತಿರುವ ಯುವಪಡೆಯ ಉತ್ಸಾಹ ಸಂಭ್ರಮ ಮುಗಿಲು ಮುಟ್ಟಿದೆ. ಕಣ್ಣು ಹಾಯಿಸಿದಷ್ಟೂ ಕಿಕ್ಕಿರಿದು ಸೇರಿದ ಕನ್ನಡಿಗರು, ನಾಡು ನುಡಿಯ ವೈಭವ ಪಸರಿಸಿಕೊಂಡಿತ್ತು.

ಹಳದಿ ಕೆಂಪು ದ್ವಜಗಳ ಹಾರಾಟ, ಕನ್ನಡ ಚಿತ್ರಗೀತೆಗಳಿಗೆ ಕನ್ನಡಿಗರು ಕುಣಿದು ಕುಪ್ಪಳಿಸುವ ಮೂಲಕ ರಾಜ್ಯೋತ್ಸವದ ವೈಭವದ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು, ಯುವಕರು, ಯುವತಿಯರು, ಮಹಿಳೆಯರು, ಹಿರಿಯರು ವೈಭವದ ಮೆರವಣಿಗೆಯಲ್ಲಿ ಭಾಗಿಯಾದರು. ಯುವಜನರಂತೂ ಎದೆ ನಡುಗಿಸುವಂಥ ಡಿ.ಜೆ, ಡಾಲ್ಬಿ ಹಾಡಿಗೆ ಕುಣಿದು ಕುಪ್ಪಳಿಸಿದರು.

ನಗರದ ಮೂಲೆಮೂಲೆಯಿಂದ, ಹಳ್ಳಿ ಪಟ್ಟಣಗಳಿಂದ ಅಪಾರ ಸಂಖ್ಯೆಯ ಕನ್ನಡಾಭಿಮಾನಿಗಳು ಜಮಾಯಿಸಿದ್ದರು. ನಗರದ ವಿವಿಧ ಬಡಾವಣೆ, ಓಣಿಗಳು, ತಾಲೂಕಿನ ಹಳ್ಳಿ ಹಳ್ಳಿಯಿಂದ ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಗಮನಸೆಳೆಯುತ್ತಿವೆ.

ಕರ್ನಾಟಕದ ಗತವೈಭವ ಸಾರುವ ಸ್ತಬ್ಧಚಿತ್ರಗಳು ಆಕರ್ಷಣೀಯವಾಗಿದ್ದವು. ವಿವಿಧ ದೇಸಿ ವಾದ್ಯ ಮೇಳಗಳಿಗೆ ಯುವಕರು ಹೆಜ್ಜೆ ಹಾಕಿದರು.

Advertisement

ವಿವಿಧ ಕನ್ನಡ ಸಂಘಟನೆಗಳು ಸ್ತಬ್ಧಚಿತ್ರಗಳೊಂದಿಗೆ
ಡಿಜೆ ಡಾಲ್ಬಿಗಳ ನಾದಕ್ಕೆ ಯುವಕರು ಹುಚ್ಚೆದ್ದು ಕುಣಿದು ಕುಪ್ಪಳಿಸಿದರು. ಹಳದಿ ಕೆಂಪು ಧ್ವಜ ಹಿಡಿದುಕೊಂಡು ಕುಣಿಯುತ್ತಿರುವ ಕನ್ನಡಿಗರ ಸಂಭ್ರಮ ಮೇರೆ ಮೀರಿದೆ. ಕನ್ನಡ ಶಲ್ಯಾ ಹಾರಿಸಿ, ಧ್ವಜಗಳನ್ನು ತಿರುಗಿಸುತ್ತಿರುವ ಮೈನವಿರೇಳಿಸುವಂತಿತ್ತು. ರಾಜ್ಯದಲ್ಲಿಯೇ ಅದ್ಭುತವಾಗಿ ನಡೆಯುವ ಬೆಳಗಾವಿಯ ಮೆರವಣಿಗೆಯ ವೈಭವ ನೋಡುವುದೇ ಸೊಗಸು. ಕನ್ನಡದ ಮೇಲಿರುವ ಬೆಳಗಾವಿಗರ ಈ ಸಂಭ್ರಮ ಕಣ್ತುಂಬಿಕೊಳ್ಳಲು ಪಕ್ಕದ ಜಿಲ್ಲೆಯಿಂದ ಜನ ಬಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next