ಬೆಂಗಳೂರು : ಕೋವಿಡ್ ಉಲ್ಬಣಗೊಳ್ಳುವ ಪ್ರಾಥಮಿಕ ಸುಳಿವಿನ ಮೇಲೆ ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸರಳವಾಗಿ ಮತ್ತು ಗೌರವ ಪೂರ್ವಕವಾಗಿ ಆಚರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ರಾಜ್ಯೋತ್ಸವ ಆಚರಣೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿಗಳನ್ನು ಶನಿವಾರ ಸರಕಾರ ಬಿಡುಗಡೆ ಮಾಡಿದೆ.
ಮಾರ್ಗಸೂಚಿಗಳು ಇಂತಿವೆ
ರಾಜ್ಯಾದ್ಯಂತ 500 ಜನಕ್ಕಿಂತ ಹೆಚ್ಚು ಸೇರಿಸುವಂತಿಲ್ಲ. ಕಡ್ಡಾಯವಾಗಿ ಮಾಸ್ಕ್ , ಸ್ಯಾನಿಟೈಜರ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾಮಾಜಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿಷೇಧ .
ಗೌರವ ಪೂರ್ವಕವಾಗಿ ಶಾಂತಿ ಸುವ್ಯವಸ್ಥೆಗೆ ಭಂಗ ತರದಂತೆ ಆಚರಿಸಬೇಕು.
ಸಂಘ-ಸಂಸ್ಥೆಗಳು ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು.
ಕನಿಷ್ಠ ಸಾಂಸ್ಕ್ರತಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಹಿರಿಯ ನಾಗರಿಕರು, ಅನಾರೋಗ್ಯ ಪೀಡಿತರು, ಪುಟ್ಟ ಮಕ್ಕಳು ಕಾರ್ಯಕ್ರಮದಿಂದ ದೂರ ಉಳಿಯುವುದು ಉತ್ತಮ.
ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯಿದೆ, ಸೆಕ್ಷನ್ 188 ಅಡಿಯಲ್ಲಿ ಶಿಸ್ತು ಮತ್ತು ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.