ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಥಾಣೆ ಸಂಚಾಲಕತ್ವದ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ 63ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯು ನಡೆಯಿತು.
ಅಧ್ಯಕ್ಷತೆಯನ್ನು ವಹಿಸಿದ್ದ ಆದಿಶಕ್ತಿ ಕನ್ನಡ ಸಂಘ ಮತ್ತು ಶಾಲೆಯ ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಅವರು ವಹಿಸಿ ಮಾತನಾಡಿ, ಕನ್ನಡ ನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ-ಬೆಳೆಸುವಲ್ಲಿ ಯುವಪೀಳಿಗೆ ಮುಂದಾಗಬೇಕು. ಕನ್ನಡದ ಬಗ್ಗೆ ಮಕ್ಕಳು ಕೀಳರಿಮೆ ಬೆಳೆಸಿಕೊಳ್ಳಬಾರದು ಎಂದರು.
ಶ್ರೀ ಆದಿಶಕ್ತಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಶಿಮಂತೂರು ಶಂಕರ ಶೆಟ್ಟಿ ಮಾತನಾಡಿ, ಕರ್ನಾಟಕವು ಎಲ್ಲ ನೈಸರ್ಗಿಕ ಸಂಪನ್ಮೂಲವನ್ನು ಹೊಂದಿರುವ ಸಮೃದ್ಧ ರಾಜ್ಯವಾಗಿದೆ. ಕನ್ನಡ ಭಾಷೆಯು ಅತೀ ಪ್ರಾಚೀನ ಭಾಷೆಯಾಗಿದ್ದು, ನಮ್ಮ ದೇಶದ ಅಭಿವೃದ್ಧಿಯಲ್ಲಿ ಕನ್ನಡಿಗರ ಕೊಡುಗೆ ಅಪಾರವಾಗಿದೆ ಎಂದು ನುಡಿದರು.
ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಮಾಧ್ಯಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಅವರು ಸ್ವಾಗತಿಸಿ ದರು. ಮಾಧ್ಯಮಿಕ ಶಾಲಾ ವಿದ್ಯಾರ್ಥಿ ರಾಹುಲ್ ರಾಥೋಡ್ ಕರ್ನಾಟಕ ರಾಜ್ಯೋತ್ಸವದ ಬಗ್ಗೆ ಮಾತನಾಡಿ, ಕರ್ನಾಟಕದ ವೈಭವ, ಸಂಸ್ಕೃತಿ, ಆಚಾರ-ವಿಚಾರ ವಿವರಿಸಿದರು.
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ವಾದಿರಾಜ ಶೆಟ್ಟಿ, ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಬಿ. ಉಪಸ್ಥಿತರಿದ್ದರು. ಸಭೆಯಲ್ಲಿ ಸಲಹೆಗಾರರಾದ ರಮಾನಾಥ ಐಲ್ ಅವರು ಉಪಸ್ಥಿತರಿದ್ದರು. ಸಹ ಶಿಕ್ಷಕ ವೆಂಕಟರಮಣ ಶೆಣೈ ಅವರು ಕಾರ್ಯ ಕ್ರಮ ನಿರ್ವಹಿಸಿದರು. ಸಹ ಶಿಕ್ಷಕ ಸಂತೋಷ್ ದೊಡ್ಮನಿ ವಂದಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಿಕ್ಷಕ- ಶಿಕ್ಷಕಿಯರು, ಶಿಕ್ಷಕೇತರ ಸಿಬಂದಿಗಳು, ವಿದ್ಯಾರ್ಥಿಗಳು, ಪಾಲಕ-ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು.