Advertisement

ಹಿಂದಿ ಹೇರಿಕೆ ವಿರೋಧಿಸಿ ಕರವೇ ಪ್ರತಿಭಟನೆ

04:25 PM Sep 14, 2019 | Team Udayavani |

ಗದಗ: ಕೇಂದ್ರ ಸರಕಾರ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ನಗರದಲ್ಲಿ ಶನಿವಾರ ಕರಾಳ ದಿನ ಆಚರಿಸಲಾಯಿತು. ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು, ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

Advertisement

ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿ ಜಮಾಯಿಸಿದ ಕರವೇ ಕಾರ್ಯಕರ್ತರು, ಹಿಂದಿಯೇತರ ರಾಜ್ಯಗಳಲ್ಲಿ ಕೇಂದ್ರ ಸರಕಾರ ಒತ್ತಾಯಪೂರ್ವಕವಾಗಿ ಹಿಂದಿ ಭಾಷೆಯನ್ನು ಅನುಷ್ಠಾನಗೊಳಿಸುತ್ತಿದೆ.

ಬ್ಯಾಂಕ್‌ಗಳು, ರೈಲ್ವೇ ನಿಲ್ದಾಣ, ಅಂಚೆ ಕಚೇರಿ ಸೇರಿದಂತೆ ಕೇಂದ್ರ ಸರಕಾರದ ವಿವಿಧ ಇಲಾಖೆಗಳು ಹಿಂದಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಪ್ರಾದೇಶಿಕ ಭಾಷೆಯನ್ನು ಕಡೆಗಣಿಸುತ್ತಿದೆ ಎಂದು ಅಸಮಾ ಧಾನ ವ್ಯಕ್ತಪಡಿಸಿದರು.

ಭಾರತೀಯ ಸಂವಿಧಾನ ಮತ್ತು ಯಾವುದೇ ಕಾನೂನಿನಲ್ಲಿ ಹಿಂದಿಯನ್ನು ರಾಷ್ಟ್ರ ಭಾಷೆಯನ್ನಾಗಿಸಿ ಉಲ್ಲೆ ಖಿಸಿಲ್ಲ. ಈ ಹಿನ್ನೆಲೆಯಲ್ಲಿ ಮುಂಬರುವ ವರ್ಷದಿಂದ ‘ಹಿಂದಿ ದಿವಸ’ ಆಚರಣೆಯನ್ನು ಕೈಬಿಡಬೇಕು. ಹಿಂದಿ ಹೇರಿಕೆಯನ್ನು ಖಂಡಿಸಿ ರಾಜ್ಯದ ಸಂಸದರು ಧ್ವನಿ ಎತ್ತಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next