ಬೆಂಗಳೂರು: ಕರ್ನಾಟಕದ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಪುನೀತ್ ಆಪ್ತ ಗೆಳೆಯ, ತೆಲುಗು ಸ್ಟಾರ್ ನಟ ಜ್ಯೂನಿಯರ್ ಎನ್ ಟಿಆರ್ ಬೆಂಗಳೂರಿಗೆ ಆಗಮಿಸಿದ್ದಾರೆ.
ರಜನಿಕಾಂತ್ ಮತ್ತು ಜ್ಯೂನಿಯರ್ ಎನ್ ಟಿಆರ್ ಪ್ರತ್ಯೇಕವಾಗಿ ವಿಮಾನದಲ್ಲಿ ಆಗಮಿಸಿದ್ದು, ಅವರನ್ನು ಸಚಿವ ಡಾ.ಸುಧಾಕರ್, ಮುನಿರತ್ನ ಅವರು ಹೂಗುಚ್ಛ ನೀಡಿ ಸ್ವಾಗತಿಸಿದ್ದರು.
ಕನ್ನಡ ರಾಜ್ಯೋತ್ಸವದಂದು ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿಯು ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಅವರಿಗೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ವಿಧಾನಸೌಧದ ಮುಂಭಾಗ ಸಂಜೆ 4.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Related Articles
ಈ ಕಾರ್ಯಕ್ರಮದಲ್ಲಿ ಖ್ಯಾತ ನಟ ರಜನಿಕಾಂತ್, ಜ್ಯೂನಿಯರ್ ಎನ್ ಟಿಆರ್, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ಕನ್ನಡ ಚಲನಚಿತ್ರ ರಂಗದ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಕುಟುಂಬಕ್ಕೆ ಸರ್ಕಾರದಿಂದ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.