ಬೆಂಗಳೂರು: ಕೇರಳದಲ್ಲಿ ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗತೊಡಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್
ಗುರುವಾರ ರಾಜ್ಯದಲ್ಲಿ 2,052 ಹೊಸ ಕೋವಿಡ್ ಪ್ರಕರಣ ವರದಿಯಾಗಿದ್ದು, ಇದು ಬುಧವಾರದ ಅಂಕಿಅಂಶ(1,531 ಕೇಸ್)ಕ್ಕಿಂತ ಶೇ.34ರಷ್ಟು ಹೆಚ್ಚಳವಾದಂತಾಗಿದೆ. ಗುರುವಾರ ಬೆಂಗಳೂರಿನಲ್ಲಿ 505 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಬುಧವಾರ 376 ಕೋವಿಡ್ ಪ್ರಕರಣ ವರದಿಯಾಗಿತ್ತು.
ಆರೋಗ್ಯ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 23,253ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಪಾಟಿಟಿವಿಟಿ ದರ ಶೇ.1.37ಕ್ಕೆ ಏರಿಕೆಯಾಗಿದೆ. ಗುರುವಾರ 1,48,861 ಮಂದಿಯ ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ ಎಂದು ವರದಿ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ ರಾಜ್ಯದಲ್ಲಿ 35 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು 36,491 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29 ಲಕ್ಷ ದಾಟಿರುವುದಾಗಿ ವರದಿ ಹೇಳಿದೆ.