ಬೆಂಗಳೂರು : ಹೊಸವರ್ಷಾರಂಭಕ್ಕೆ ಕೋವಿಡ್ ಮತ್ತು ರೂಪಾಂತರಿ ಒಮಿ ಕ್ರಾನ್ ಆತಂಕ ಎದುರಾಗಿದ್ದು, ಜನವರಿ ಮೊದಲ ದಿನ ರಾಜ್ಯದಲ್ಲಿ 1,033 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಶನಿವಾರ 810 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಐದು ಹೊಸ ಕೋವಿಡ್ ಸಾವುಗಳು ವರದಿಯಾಗಿವೆ. ಇದೆ ವೇಳೆ 354 ಮಂದಿಯ ಚೇತರಿಕೆಗಳು ದಾಖಲಾಗಿವೆ.
ದಕ್ಷಿಣ ಕನ್ನಡದಲ್ಲಿ 48 ,ಮೈಸೂರು 29 ಉಡುಪಿ 28, ಮಂಡ್ಯದಲ್ಲಿ 23 ಪ್ರಕರಣಗಳು ದಾಖಲಾಗಿದೆ.
ಹೊಸ ವರ್ಷದ ಮುನ್ನಾದಿನದಂದು ಶುಕ್ರವಾರ ಸಂಜೆ 6 ಗಂಟೆಯಿಂದ ಸಾರ್ವಜನಿಕರಿಗೆ ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ಮುಚ್ಚಿ ಬೆಂಗಳೂರು ನಗರ ಸಂಚಾರ ಪೊಲೀಸರು ನಿರ್ಬಂಧ ಹೇರಿದ್ದರು.
ಶುಕ್ರವಾರ ಸಂಜೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನಿಷೇಧಾಜ್ಞೆ ಹೊರಡಿಸಿದ್ದರು. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳು ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದ್ದು , ನೈಟ್ ಕರ್ಫ್ಯೂ ಜಾರಿಯಲ್ಲಿದೆ.