Advertisement

ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಬಿಜೆಪಿಗೆ?

12:01 AM Mar 01, 2023 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ದಾವಣಗೆರೆಗೆ ಆಗಮಿಸುತ್ತಿರುವ ಸಂದರ್ಭದಲ್ಲೇ ಆಮ್‌ ಆದ್ಮಿ ಪಕ್ಷಕ್ಕೆ ಬಿಜೆಪಿ ಶಾಕ್‌ ನೀಡಲು ಮುಂದಾಗಿದ್ದು, ನಿವೃತ್ತ ಐಪಿಎಸ್‌ ಅಧಿಕಾರಿ, ಆಮ್‌ ಆದ್ಮಿ ಪಕ್ಷದ ಮುಖಂಡ ಭಾಸ್ಕರ್‌ ರಾವ್‌ ಅವರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದೆ.

Advertisement

ಯಾವುದೇ ಸ್ಥಾನಮಾನ ನಿರೀಕ್ಷೆ ಇಲ್ಲದೆ ಪಕ್ಷ ಸೇರ್ಪಡೆಗೆ ಭಾಸ್ಕರ್‌ ರಾವ್‌ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದ್ದು, ಬುಧವಾರ ಬೆಳಗ್ಗೆಯೇ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಪೃಥ್ವಿ ರೆಡ್ಡಿ ಆಪ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿದ ಬಳಿಕ ಪಕ್ಷದ ಚಟುವಟಿಕೆಗಳಿಂದ ತುಸು ದೂರವಾಗಿದ್ದ ಭಾಸ್ಕರ್‌ ರಾವ್‌, ಚುನಾವಣ ಹೊಸ್ತಿಲಲ್ಲಿ ಬಿಜೆಪಿ ಸೇರುತ್ತಿದ್ದಾರೆ.

ಅಣ್ಣಾಮಲೈ ಮಹತ್ವದ ಪಾತ್ರ
ರಾಜ್ಯ ಚುನಾವಣ ಸಹ ಉಸ್ತುವಾರಿ, ನಿವೃತ್ತ ಐಪಿಎಸ್‌ ಕೆ. ಅಣ್ಣಾಮಲೈ ಅವರು ಭಾಸ್ಕರ್‌ ರಾವ್‌ ಬಿಜೆಪಿ ಸೇರ್ಪಡೆ ಹಿಂದೆ ಮಹತ್ವದ ಪಾತ್ರ ವಹಿಸಿದ್ದಾರೆಂದು ಹೇಳಲಾಗಿದೆ.

ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಅಣ್ಣಾಮಲೈ ಜತೆ ಭಾಸ್ಕರ್‌ ರಾವ್‌ ಚರ್ಚೆ ನಡೆಸಿದ್ದಾರೆ. ಕಂದಾಯ ಸಚಿವ ಆರ್‌. ಅಶೋಕ್‌ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಂಘ-ಪರಿವಾರದ ಹಿರಿಯರನ್ನು ಈ ಹಿಂದೆಯೇ ಅವರು ಭೇಟಿ ಮಾಡಿದ್ದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next