Advertisement
ಗಿರಿಜನ ಉಪಯೋಜನೆ ಅನುದಾನ ಬಳಕೆ ಮಾಡಿಕೊಂಡು ಇಂತದ್ದೊಂದು ಯೋಜನೆ ರೂಪಿ ಸಿದ್ದು ಇದಕ್ಕಾಗಿಯೇ ಹಲವು ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಹಿಂದೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಹೊಸಹಳ್ಳಿಯ ಗಿರಿಜನರ ಹಾಡಿಯಲ್ಲಿ “ಬುಡಕಟ್ಟು ಸಾಹಿತ್ಯ ಮತ್ತು ಸಂಸ್ಕೃತಿಕ ಕುರಿತ’ ಶಿಬಿರವನ್ನು ಹಮ್ಮಿಕೊಂಡಿತ್ತು. ಸುಮಾರು 40 ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ಈ ಕಮ್ಮಟದಲ್ಲಿ ಭಾಗವಹಿಸಿ ಕಮ್ಮಟಕ್ಕೆ ಮೆಚ್ಚುಗೆ ವ್ಯಕ್ತವಾದ್ದರಿಂದ ಅಕಾಡೆಮಿ ಇದೀಗ ಗಿರಿಜನರೆಡೆಗೆ ಯೋಜನೆಗೆ ಮುಂದಾಗಿದೆ.
Related Articles
Advertisement
ಬುಡಕಟ್ಟು ಸಮುದಾಯದ ಶ್ರೀಮಂತ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಗಿರಿಜನರ ಉಪಯೋಜನೆಯಡಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಬುಡಕಟ್ಟು ಸಮುದಾಯ ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ಆ ಸಮುದಾಯದ ಈಗಿನ ಪೀಳಿಗೆಯ ಮಕ್ಕಳಿಗೆ ಸರಿಯಾದ ಪರಿಚಯವಿಲ್ಲ.
ಅಲ್ಲದೆ ಅವರಲ್ಲಿರುವ ಕೀಳರಿಮೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಮ್ಮಟಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯುದಯಕ್ಕೆ ಸರ್ಕಾರ ನೀಡಿರುವ ಅನುದಾನವನ್ನು ಅಕಾಡೆಮಿ ಬಳಕೆ ಮಾಡಿಕೊಂಡಿಲ್ಲ.ಹೀಗಾಗಿ ಆ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಅಕಾಡೆಮಿ ಮುಂದಾಗಿದೆ. ಬುಡಕಟ್ಟು ಸಮುದಾಯದ ಕಾರ್ಯಕ್ರಮ ರೂಪಿಸಲು ಸರ್ಕಾರ ನೀಡಿರುವ ಅನುದಾನ ಇನ್ನೂ 30ಲಕ್ಷ ರೂ.ಇದ್ದು ಅದನ್ನು ಬುಡಕಟ್ಟು ಸಮುದಾಯದ ಸಾಹಿತ್ಯ ಮತ್ತು ಸಂಸ್ಕೃತಿಕ ಕುರಿತ ಕಮ್ಮಟಗಳಿಗೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಬುಡಕಟ್ಟು ಸಮುದಾಯದಲ್ಲಿ ಶ್ರೀಮಂತ ಸಂಸ್ಕೃತಿ ಇದೆ. ಅದನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಆಗಬೇಕಾಗಿದೆ. ಆ ಹಿನ್ನೆಲೆಯಲ್ಲಿ ಬಡಕಟ್ಟು ಸಮುದಾಯದ ವಿದ್ಯಾವಂತ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಂಡು ಆ ಸಮುದಾಯದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಜೀವಂತವಾಗಿಡುವ ಕೆಲಸ ಅಕಾಡೆಮಿ ವತಿಯಿಂದ ನಡೆದಿದೆ. – ಡಾ.ಬಿ.ವಿ.ವಸಂತಕುಮಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ.
●ದೇವೇಶ ಸೂರಗುಪ್ಪ