Advertisement
ಜು. 8ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆದ ಕರ್ನಾಟಕ ಸಂಘ ಅಂಧೇರಿ ಇದರ 12ನೇ ವಾರ್ಷಿಕೋತ್ಸವ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಇಂದಿನ ಈ ಕಾರ್ಯಕ್ರಮವು ಉತ್ತಮ ವಾಗಿದ್ದು, ಸಮಾಜ ಸೇವೆಗೈದು ತೆರೆಮರೆಯಲ್ಲಿರುವ ಸಾಧಕರನ್ನು ಗುರುತಿಸಿದ ವಿಶೇಷ ಕಾರ್ಯವನ್ನು ಸಂಸ್ಥೆಯು ಮಾಡಿದೆ. ಇಂತಹ ಸಂಸ್ಥೆಗೆ ಉತ್ತಮ ಭವಿಷ್ಯವಿದ್ದು, ಸಂಸ್ಥೆಯ ನಾಡು-ನುಡಿ, ಸಮಾಜಪರ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
Related Articles
Advertisement
ಇನ್ನೋರ್ವ ಅತಿಥಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರು ಮಾತನಾಡಿ, ಸಾಮಾಜಿಕ ಕಾರ್ಯಗಳನ್ನು ಹೇಗೆ ಮಾಡಬಹುದು ಎಂಬುವುದನ್ನು ಅಂಧೇರಿ ಕರ್ನಾಟಕ ಸಂಘವು ತೋರಿಸಿಕೊಟ್ಟಿದೆ. ಮುಂಬಯಿ ಕನ್ನಡಿಗರು ಒತ್ತಡ ಭರಿತ ಜೀವನದ ನಡುವೆಯೂ ಸಂಘಟನೆ ಗಳನ್ನು ಸ್ಥಾಪಿಸಿ, ಪ್ರತಿಭೆ ಗಳನ್ನು ಬೆಳೆಸುವ ಕಾರ್ಯವನ್ನು ಮಾಡು ತ್ತಿರುವುದು ವಿಶೇಷತೆ ಯಾಗಿದೆ ಎಂದು ನುಡಿದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೆರಿಮೆರಿ ಶ್ರೀ ಉಮಾಮಹೇಶ್ವರಿ ಮಂದಿರದ ಅರ್ಚಕ ಎಸ್. ಎನ್. ಉಡುಪ, ಟೆಕ್‌ನಿಕ್ ಎಂಜಿನೀಯರಿಂಗ್ ಇದರ ಎಂಡಿ ನಾಗರಾಜ್ ಪಡುಕೋಣೆ, ಉದ್ಯಮಿ ಸುಭಾಷ್ ಶೆಟ್ಟಿ, ಸುಗಮ ಸಂಗೀತ ಪರಿಷತ್ ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ ಕಾಪು, ಫಾಸ್ಟ್‌ಟ್ರಾÂಕ್ ವಲ್ಶ್ವೈಡ್ ಪ್ರೈವೇಟ್ ಲಿಮಿಟೆಡ್ ಇದರ ಮಂಜುನಾಥ ಶೆಟ್ಟಿ, ಗಜಾನನ ಇಂಡಸ್ಟ್ರೀಸ್ ಇದರ ಬಿ. ಗಣಪತಿ, ಸ್ಟ್ರೇಕಾನ್ ಬಿಲ್ಡರ್ ಆ್ಯಂಡ್ ಡೆವಲಪರ್ ಇದರ ಸುರೇಶ್ ಶೆಟ್ಟಿ, ಗಾಣಿಗ ಸಮಾಜ ಮುಂಬಯಿ ಅಧ್ಯಕ್ಷ ರಾಮಚಂದ್ರ ಗಾಣಿಗ, ಉದ್ಯಮಿ ಪ್ರವೀಣ್ ಶೆಟ್ಟಿ ಪುಣೆ ಅವರು ಮಾತನಾಡಿ ಸಂಸ್ಥೆಗೆ ಶುಭಹಾರೈಸಿದರು.ಸಮಾರಂಭದಲ್ಲಿ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಸ್ಥಾಪಕ ದೇವರಾಯ ಶೇರುಗಾರ್ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಪತ್ರಕರ್ತ ದಯಾ ಸಾಗರ್ ಚೌಟ ಇವರು ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಭಾಸ್ಕರ ಸಸಿಹಿತ್ಲು ನಡೆಸಿಕೊಟ್ಟರು. ಅತಿಥಿ-ಗಣ್ಯರುಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವೇದಿಕೆಯಲ್ಲಿ ಸಂಸ್ಥಾಪಕಾಧ್ಯಕ್ಷ ಕೃಷ್ಣ ಶೆಟ್ಟಿ, ಸಂಸ್ಥೆಯ ಗೌರವಾಧ್ಯಕ್ಷ ಪಿ. ಧನಂಜಯ ಶೆಟ್ಟಿ, ಅಧ್ಯಕ್ಷ ಹ್ಯಾರಿ ಸಿಕ್ವೇರ, ಉಪಾಧ್ಯಕ್ಷರುಗಳಾದ ರವೀಂದ್ರ ಶೆಟ್ಟಿ ಮತ್ತು ಸತೀಶ್ ಕರ್ಕೇರ, ಗೌರವ ಪ್ರಧಾನ ಕಾರ್ಯ ದರ್ಶಿ ರಾಜೇಂದ್ರ ರಾವ್, ಜತೆ ಕಾರ್ಯದರ್ಶಿ ದಿನೇಶ್ ಆರ್. ಕೆ., ಗೌರವ ಕೋಶಾಧಿಕಾರಿ ಗಣೇಶ್ ಬಲ್ಯಾಯ, ಜತೆ ಕೋಶಾಧಿಕಾರಿ ಸೀತಾರಾಮ ಪೂಜಾರಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಡೆದ ಕುಣಿತ ಭಜನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಸಸಿಹಿತ್ಲು ಕದಿಕೆ ಶ್ರೀ ರಾಧಾಕೃಷ್ಣ ಭಜನ ಮಂಡಳಿ, ದ್ವಿತೀಯ ಕುಂದಾಪುರ ಬಟ್ಟೆಕುದ್ರು ಶ್ರೀರಾಮ ಭಜನ ಮಂಡಳಿ, ತೃತೀಯ ಉಮಾಮಹೇಶ್ವರಿ ದೇವಸ್ಥಾನ ಜೆರಿಮೆರಿ ಭಜನ ಮಂಡಳಿ ಪಡೆಯಿತು. ವಿಜೇತ ಸ್ಪರ್ಧಿಗಳಿಗೆ ಅತಿಥಿ-ಗಣ್ಯರು ನಗದು ಬಹುಮಾನದೊಂದಿಗೆ ಪ್ರಶಸ್ತಿ ಪ್ರದಾನಿಸಿದರು. ಸಂಸ್ಥೆಯ ಸದಸ್ಯ ಬಾಂಧವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನವನ್ನು ನೀಡಲಾಯಿತು. ಚಿತ್ರ-ವರದಿ: ಸುಭಾಷ್ ಶಿರಿಯಾ