ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದರು. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ61.88 ರಷ್ಟು ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಲಾಗಿದೆ.
ವಿದ್ಯಾರ್ಥಿಗಳು //www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪಡೆದುಕೊಳ್ಳಬಹುದಾಗಿದೆ.
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆದಿತ್ತು. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಫ್ರೆಶರ್ಸ್ ವಿದ್ಯಾರ್ಥಿಗಳಲ್ಲಿ 5,99,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,022,697 ತೇರ್ಗಡೆಯಾಗಿದ್ದಾರೆ. ಪುನರಾವರ್ತಿತ 61,838 ವಿದ್ಯಾರ್ಥಿಗಳಲ್ಲಿ 14,403 ಮಂದಿ ಪಾಸಾಗಿದ್ದಾರೆ. 21,931 ಖಾಸಗಿ ವಿದ್ಯಾರ್ಥಿಗಳಲ್ಲಿ 5,866 ಮಂದಿ ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ (88.02) ಮೊದಲ ಸ್ಥಾನ ಪಡೆದಿದ್ದರೆ, ಉಡುಪಿ ಜಿಲ್ಲೆ ( 86.38) ಎರಡನೇ ಸ್ಥಾನ ಪಡೆದಿದೆ. ಶೇ 49.31 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.
ಗಣಿತ ವಿಷಯದಲ್ಲಿ 14210 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದಿದ್ದು, ಅಕೌಂಟನ್ಸಿಯಲ್ಲಿ 3460 ವಿದ್ಯಾರ್ಥಿಗಳು, ಕಂಪ್ಯೂಟರ್ ಸೈಯನ್ಸ್ ನಲ್ಲಿ 4868 ವಿದ್ಯಾರ್ಥಿಗಳು ಶತಪ್ರತಿಶತ ಅಂಕ ಪಡೆದಿದ್ದಾರೆ.