Advertisement
ವಿಧಾನಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ದೊಡ್ಡ-ಅತಿದೊಡ್ಡ ಅಥವಾ ಬೃಹತ್ ಗಾತ್ರದ ಅಂದರೆ 1,250 ಎಕರೆಗೂ ಮೀರಿದ ಹೂಡಿಕೆ ಪ್ರದೇಶ, ಕೈಗಾರಿಕಾ ಪ್ರದೇಶಗಳು ಅಥವಾ ಕ್ಲಸ್ಟರ್‌ಗಳನ್ನು ಸ್ಥಾಪಿಸಲು, ನಡೆಸಲು, ನಿಯಂತ್ರಿಸಲು ಮತ್ತು ನಿರ್ವಹಿಸಲು ಮುಖ್ಯವಾಗಿ ಜಾಗತಿಕ ಉತ್ಪಾದನ ಪ್ರಮುಖ ತಾಣವಾಗಿ ಕರ್ನಾಟಕದ ಸ್ಥಾನವನ್ನು ಉಳಿಸಿಕೊಳ್ಳಲು, ಈ ಮಸೂದೆವನ್ನು ತರಲಾಗುತ್ತಿದೆ ಎಂದು ವಿವರಣೆ ನೀಡಿದರು.
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ಬೆಂಗಳೂರಿಗೆ ಸೀಮಿತವಾಗಿ ಮಾಡಿರುವ ಎಲೆಕ್ಟ್ರಾನಿಕ್ ಸಿಟಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಯಶಸ್ವಿ ಪ್ರಯೋಗವನ್ನು ಆಧರಿಸಿಯೇ ರಾಜ್ಯಕ್ಕೆ ಅನ್ವಯವಾಗುವಂತೆ ವಿಶೇಷ ಹೂಡಿಕೆ ಪ್ರದೇಶ ಪ್ರಾಧಿಕಾರ ತರಲಾಗುತ್ತಿದೆ. ಕೆಎಐಡಿಬಿ ಕೆಲಸ ಈ ಪ್ರಾಧಿಕಾರ ಮಾಡಲಿದೆ. ಹಾಗಂತ, ಕೆಎಐಡಿಬಿ ಅಧಿಕಾರ ಮೊಟಕುಗೊಳ್ಳುವುದಿಲ್ಲ. ಮಸೂದೆಗೆ ಕಾನೂನು ಇಲಾಖೆಯ ಪರಿಶೀಲನೆ ಆಗಿದೆ. ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಯ ಒಪ್ಪಿಗೆ ಪಡೆದುಕೊಳ್ಳಲಾಗಿದೆ. ಬೇರೆ-ಬೇರೆ ಕೈಗಾರಿಕಾ ಸಂಘ-ಸಂಸ್ಥೆಗಳ ಬೇಡಿಕೆಯಂತೆ ಈ ಪ್ರಾಧಿಕಾರ ತರಲಾಗುತ್ತಿದೆ. ಮೊದಲ ಹಂತದಲ್ಲಿ ರಾಜ್ಯದ ಉತ್ತರ ಮತ್ತು ದಕ್ಷಿಣದಲ್ಲಿ ಒಂದು ಮಾದರಿಯನ್ನಾಗಿ ಮಾಡಲಾಗುತ್ತಿದೆ ಎಂದರು.
Related Articles
ರಾಜ್ಯದಲ್ಲಿ ನವೆಂಬರ್‌ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಒಟ್ಟು 9.81 ಲಕ್ಷ ಕೋಟಿ ರೂ.ಗಳ 77 ಒಡಂಬಡಿಕೆಗಳಿಗೆ ಸಹಿ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಡಾ| ಮುರುಗೇಶ ನಿರಾಣಿ ಹೇಳಿದರು.
Advertisement