Advertisement

SSLC ಪೂರಕ ಪರೀಕ್ಷೆ; ಶೇ.50ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

04:24 PM Jul 13, 2017 | Sharanya Alva |

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗಾಗಿ ನಡೆದಿದ್ದ ಪೂರಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಶೇ.50.81ರಷ್ಟು ವಿದ್ಯಾರ್ಥಿಗಳು ಪಾಸಾಗಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಪ್ರಕಟಿಸಿದರು.

Advertisement

ಈ ಬಾರಿ ಒಟ್ಟು 2,42,951 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆದಿದ್ದರು. ಇವರಲ್ಲಿ ಶೇ.50.81ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಮಧ್ಯಾಹ್ನ 3ಗಂಟೆಯಿಂದ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯ ಎಂದು ಸೇಠ್ ತಿಳಿಸಿದರು. ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಜುಲೈ14ರಂದು ಬೆಳಗ್ಗೆ 10ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಈ ಅಧಿಕೃತ ವೆಬ್ ಸೈಟ್ ಗೆ ಭೇಟಿ ಕೊಡಿ; karresults.nic.in

Advertisement

Udayavani is now on Telegram. Click here to join our channel and stay updated with the latest news.

Next