Advertisement

ಬಜೆಟ್ ; ಬೆಂಗಳೂರಿಗೆ ಸಬ್ ಅರ್ಬನ್ ರೈಲು ಸೇರಿದಂತೆ ಬಂಪರ್ ಕೊಡುಗೆ

01:30 PM Feb 08, 2019 | Sharanya Alva |

ಬೆಂಗಳೂರು: ರಾಜಕೀಯ ಗೊಂದಲಗಳ ನಡುವೆ ಸಿಎಂ ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ್ದ ಮೈತ್ರಿ ಸರ್ಕಾರದ 2ನೇ ಬಜೆಟ್ ನಲ್ಲಿ ಬೆಂಗಳೂರು ನಗರಕ್ಕೆ ಬಂಪರ್ ಕೊಡುಗೆ ಘೋಷಿಸಲಾಗಿದೆ.

Advertisement

1)ಬೆಂಗಳೂರಿನ ಚಲನಶೀಲತೆಗಾಗಿ ಸಮಗ್ರ ಯೋಜನೆ ಜಾರಿ, ಸಾರ್ವಜನಿಕ ಸಾರಿಗೆ ಮತ್ತು ಸುಸ್ಥಿರತೆಗೆ ಆದ್ಯತೆ, ಎಲ್ಲ ರೀತಿಯ ಚಾಲನಾ ಸೌಲಭ್ಯಗಳನ್ನು ಒಳಗೊಂಡ ಯೋಜನೆ, ಬಿಎಂಟಿಸಿಗೆ ಬಸ್ ಸಂಖ್ಯೆ ಹೆಚ್ಚಳಕ್ಕೆ ಮುಂದಿನ ವರ್ಷಗಳಲ್ಲಿ ಅನುದಾನ, ಕನಿಷ್ಠ 50 ಕಿ.ಮೀ ಕಾಲುದಾರಿಗಳ ಅಭಿವೃದ್ಧಿ. ಇದಕ್ಕಾಗಿ 50 ಕೋಟಿ ರೂ. ಅನುದಾನ.

2)8015 ಕೋಟಿ ರೂಪಾಯಿ ಅಂದಾಜು ವೆಚ್ಚದ ನವ ಬೆಂಗಳೂರು ಕ್ರಿಯಾ ಯೋಜನೆ ಅನುಷ್ಠಾನಕ್ಕೆ 2019-20ರಲ್ಲಿ 2,300 ಕೋಟಿ ರೂಪಾಯಿ ಅನುದಾನ. ಎಲಿವೇಟೆಡ್ ಕಾರಿಡಾರ್ ಯೋಜನೆಗೆ 2019-20ನೇ ಸಾಲಿನಲ್ಲಿ 1000 ಕೋಟಿ ರೂ. ಅನುದಾನ.

3)ಬೆಂಗಳೂರಿನಲ್ಲಿ 5 ಲಕ್ಷ ಬೀದಿ ದೀಪಗಳನ್ನು ಎಲ್ ಇಡಿ ದೀಪಗಳಾಗಿ ಪರಿವರ್ತನೆ, ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಹಾಗೂ ಬ್ರಿಗೇಡ್ ರಸ್ತೆಗಳನ್ನು ಪಾದಚಾರಿ ರಸ್ತೆಗಳನ್ನಾಗಿ ಪರಿವರ್ತಿಸಲು ಕ್ರಮ.

4)ಬೆಂಗಳೂರಿನಲ್ಲಿ ಕೆಪಿಸಿಎಲ್ ವತಿಯಿಂದ ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ 400 ಮೆಟ್ರಿಕ್ ಟನ್ ಸಾಮರ್ಥ್ಯದ ಘನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮಾಡುವ ಘಟಕ ಸ್ಥಾಪನೆ. ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಮತ್ತು ಅನುಷ್ಠಾನ ಯೋಜನೆಯ ನೀತಿ ಜಾರಿ. 10 ಸಾವಿರ ವಾಹನಗಳ ನಿಲುಗಡೆಗೆ 87 ಆಯ್ದ ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ.

Advertisement

5) 195 ಕೋಟಿ ರೂ.ವೆಚ್ಚದಲ್ಲಿ ಹೆಬ್ಬಾಳ ಮತ್ತು ಕೆಆರ್ ಪುರಂ ಫ್ಲೈ ಓವರ್ ಗಳಲ್ಲಿ ಹೆಚ್ಚುವರಿ ಲೂಪ್ ನಿರ್ಮಾಣ, ಗೊರಗುಂಟೆಪಾಳ್ಯದಲ್ಲಿ ಹೊಸ ಅಂಡರ್ ಪಾಸ್ ನಿರ್ಮಾಣ.

ಬೆಂಗಳೂರು ಸಬ್ ಅರ್ಬನ್ ರೈಲು ವ್ಯವಸ್ಥೆ:

23,093 ಕೋಟಿ ರೂಪಾಯಿ ಅಂದಾಜು ಮೊತ್ತದ ಬೆಂಗಳೂರು ಉಪ ನಗರ ರೈಲು ಸೇವೆ ಯೋಜನೆಗೆ ಚಾಲನೆ ನೀಡಲಾಗಿದೆ. ವಿಶೇಷ ಉದ್ದೇಶಿತ ವಾಹಕ, ಬೆಂಗಳುರು ಮೂಲ ಸೌಕರ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದೊಂದಿಗೆ ಅನುಷ್ಠಾನಗೊಳಿಸಲು ಕ್ರಮ.

ಹೆಬ್ಬಾಳ, ಬೈಯಪ್ಪನಹಳ್ಳಿ, ಕೆಆರ್ ಪುರಂ, ಕಾಡುಗೋಡಿ, ಚಲ್ಲಘಟ್ಟ ಹಾಗೂ ಪೀಣ್ಯ ಪ್ರದೇಶಗಳಲ್ಲಿ ಬಹುಮಾದರಿ ಪ್ರಯಾಣ ಹಬ್ ಕಾರ್ಯಸಾಧ್ಯತೆ. ಅಧ್ಯಯನ.

ಬೆಂಗಳೂರಿನ ಪ್ರಮುಖ ಸ್ಥಳಗಳಾದ ಯಶವಂತಪುರ, ಬನಶಂಕರಿ, ವಿಜಯನಗರ, ಪೀಣ್ಯ ಮತ್ತು ಇತರೆ ಪ್ರದೇಶಗಳಲ್ಲಿ ಮೆಟ್ರೋ ರೈಲು ಮತ್ತು ಟಿಟಿಎಂಸಿಗಳ ಅಂತರ್ ಕ್ರಮ ಸಂಯೋಜನೆ ವಿನ್ಯಾಸ ಹಾಗೂ ಮೂಲಸೌಕರ್ಯ ಅಭಿವೃದ್ಧಿ.

ಟೈರ್ 2 ನಗರಗಳಲ್ಲಿ ಒಂದು ಪಾರ್ಕಿಂಗ್ ನಿಯಮ ಮತ್ತು ಅನುಷ್ಠಾನ ಯೋಜನೆ ಜಾರಿ ಹಗೂ ಸುಧಾರಿತ ಸಂಚಾರ ಮಾಹಿತಿ ಮತ್ತು ನಿರ್ವಹಣಾ ವ್ಯವಸ್ಥೆಯ ಅಧ್ಯಯನಕ್ಕೆ ಕ್ರಮ.

ಮೆಟ್ರೋ ಮತ್ತು ಬಸ್ ಸೇವೆಗಳಲ್ಲಿ ಬಳಸಬಹುದಾದ ಚಾಲನೆ ಕಾರ್ಡ್ ಗಳ ಪ್ರಾರಂಭ, 3 ಕೋಚ್ ಗಳಿರುವ ಎಲ್ಲಾ ರೈಲು ಸೆಟ್ ಗಳನ್ನು 6 ಕೋಚ್ ಗಳ ಸೆಟ್ ಗಳಾಗಿ ಪರಿವರ್ತನೆ. ಆಯ್ದ 10 ಮೆಟ್ರೋ ನಿಲ್ದಾಣಗಳಲ್ಲಿ ದ್ವಿಚಕ್ರ ವಾಹನಗಳಿಗೆ ವಿದ್ಯುತ್ ಚಾರ್ಜಿಂಗ್ ಸೌಕರ್ಯ.

17,200 ಕೋಟಿ ರೂಪಾಯಿ ವೆಚ್ಚದ ಫೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ 2019-20ನೇ ಸಾಲಿಗೆ 1000 ಕೋಟಿ ರೂಪಾಯಿ ಅನುದಾನ. ಜೈಕಾ ನೆರವಿನೊಂದಿಗೆ 5550 ಕೋಟಿ ರೂ.ಗಳ ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತ ಅನುಷ್ಠಾನಕ್ಕೆ 500 ಕೋಟಿ ಅನುದಾನ.

Advertisement

Udayavani is now on Telegram. Click here to join our channel and stay updated with the latest news.

Next