Advertisement

ರಾಜ್ಯ ಬಜೆಟ್- ಆರೋಗ್ಯ ಕ್ಷೇತ್ರ; ಮಂಗನ ಕಾಯಿಲೆ ಸಂಶೋಧನಾ ಘಟಕ

12:54 PM Mar 18, 2019 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ್ದ ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನದ ವಿವರ ಇಲ್ಲಿದೆ.

Advertisement

1)ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ 2019-20ನೇ ಸಾಲಿಗೆ ರಾಜ್ಯ ಸರ್ಕಾರದಿಂದ 950 ಕೋಟಿ ರೂ. ಅನುದಾನ, ಕೇಂದ್ರದಿಂದ ದೊರೆಯುವ ಅನುದಾನ ಕೇವಲ 409 ಕೋಟಿ ರೂಪಾಯಿ.

2) ತುಮಕೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 60 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭ, ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು 50 ಕೋಟಿ ರೂ. ಅನುದಾನ.

3) ರಕ್ತ ಸಂಗ್ರಹಣೆ, ಶೇಖರಣೆ ಮತ್ತು ವಿತರಣೆಗಾಗಿ ನಾಲ್ಕು ವಿಭಾಗೀಯ ಮಾದರಿ ರಕ್ತನಿಧಿ ಕೇಂದ್ರಗಳ ಸ್ಥಾಪನೆಗೆ 10 ಕೋಟಿ ರೂ. ಅನುದಾನ, ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆಯನ್ನು 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆಯನ್ನಾಗಿ ಮೇಲ್ಜರ್ಜೆಗೇರಿಸಲು 10 ಕೋಟಿ ರೂ. ಅನುದಾನ.

4) ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ವೇರ್ ಹೌಸಿಂಗ್ ಸೊಸೈಟಿಯನ್ನು ನಿಗಮವನ್ನಾಗಿ ಮಾರ್ಪಾಡು, ತಜ್ಞರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಆಯ್ದ 11 ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಡಿಎನ್ ಬಿ ಕೇಂದ್ರಗಳ ಪ್ರಾರಂಭ.

Advertisement

5)ವಿಜಯಪುರ ಜಿಲ್ಲೆಯಲ್ಲಿ 40 ಕೋಟಿ ರೂ.ವೆಚ್ಚದಲ್ಲಿ 100 ಹಾಸಿಗೆಗಲ ಸೌಲಭ್ಯವುಳ್ಳ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ ಪ್ರಾರಂಭ. ಬೆಂಗಳೂರಿನ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಗಳ ಕ್ರೀಡಾ ರೋಗಿಗಳ ವಿಭಾಗ ಪ್ರಾರಂಭ ಹಾಗೂ ರೋಬೋಟಿಕ್ ಶಸ್ತ್ರ ಚಿಕಿತ್ಸೆ ಸೌಲಭ್ಯ ಒದಗಿಸಲು 10 ಕೋಟಿ ರೂ. ಅನುದಾನ.

6) ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸೂಕ್ತ ಆರೈಕೆಗಾಗಿ 49 ತಾಲ್ಲೂಕು ಆಸ್ಪತ್ರೆಗಳಲ್ಲಿ ಪೌಷ್ಟಿಕ ಪುನಶ್ಚೇತನ ಕೇಂದ್ರಗಳ ಸ್ಥಾಪನೆಗೆ 1 ಕೋಟಿ ರೂ . ಅನುದಾನ. ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ 5 ಕೋಟಿ ರೂ.ಗಳ ವೆಚ್ಚದಲ್ಲಿ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಪ್ರಾರಂಭ.

7) ಖಾಸಗಿ ಹಾಗೂ ಸರ್ಕಾರಿ ಸ್ವಾಮ್ಯದ ಕ್ಷ-ಕಿರಣ ಕೇಂದ್ರಗಳ ಸುರಕ್ಷತೆಯನ್ನು ಅಟಾಮಿಕ್ ಎನರ್ಜಿ ರೀಸರ್ಚ್ ಬೋರ್ಡ್ ಮಾರ್ಗದರ್ಶನದಂತೆ ಮಾಡುವ ನಿಟ್ಟಿನಲ್ಲಿ ಕ್ಷ ಕಿರಣ ಸುರಕ್ಷತಾ ನಿರ್ದೇಶನಾಲಯ ಸ್ಥಾಪನೆ. ಆಶಾ ಕಾರ್ಯಕರ್ತೆಯರ ಗೌರವಧನವನ್ನು 500ಗಳಷ್ಟು ಹೆಚ್ಚಳ. 2019ರ ನವೆಂಬರ್ 1ರಿಂದ ಜಾರಿಗೆ ಬರಲಿದ್ದು, 25 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ.

8) ಮಂಗಳೂರು, ತುಮಕೂರು, ಬಿಜಾಪುರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಚಿಕ್ಕಮಗಳೂರು, ಹಾವೇರಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿ ಒಟ್ಟು 10 ಜಿಲ್ಲೆಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಸ್ತನರೇಖನ ವ್ಯವಸ್ಥೆ ಪ್ರಾರಂಭಿಸಲು ಕ್ರಮ.

Advertisement

Udayavani is now on Telegram. Click here to join our channel and stay updated with the latest news.

Next