Advertisement

ಪಶ್ಚಿಮ ವಾಹಿನಿಗೆ ಚುರುಕು ; ಬಂದರು ಅಭಿವೃದ್ಧಿಗೆ ಆದ್ಯತೆ -ಕರಾವಳಿಗೆ ಸಿಕ್ಕಿದ್ದೇನು?

10:00 AM Mar 06, 2020 | Hari Prasad |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ ರಾಜ್ಯ ಆಯ-ವ್ಯಯ ಪತ್ರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಕೆಲವೊಂದು ಯೋಜನೆಗಳನ್ನು ಘೋಷಿಸಲಾಗಿದೆ. ಇದರಲ್ಲಿ ಪಶ್ಚಿಮ ವಾಹಿನಿ ಯೋಜನೆ, ವಿವಿಧ ಮೀನುಗಾರಿಕಾ ಬಂದರು ಅಭಿವೃದ್ಧಿ, ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿಯಂತಹ ಕಾರ್ಯಕ್ರಮಗಳು ಸೇರಿವೆ.

Advertisement

ಬಿ.ಎಸ್.ವೈ. ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳಿಗೆ ಸಿಕ್ಕಿರುವ ಕೆಲವೊಂದು ಪ್ರಮುಖ ಕೊಡುಗೆಗಳು ಹೀಗಿವೆ:

– ಕರಾವಳಿ ಭಾಗಗಳಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ‘ಕಿಂಡಿ ಅಣೆಕಟ್ಟು ಯೋಜನೆ’ಗಳ (Vented Dams)  ಪರಿಣಾಮಕಾರಿ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್.

– ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವಳಿ ಪಾರ್ಕ್ ಸ್ಥಾಪನೆ.

– ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ’ ಜಾರಿ.

Advertisement

– ‘ಮಹಿಳಾ ಮೀನುಗಾರರ ಸಬಲೀಕರಣ” ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ.

– ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.

– ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ

– ಮಂಗಳೂರು ತಾಲ್ಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ.

– ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ.

– ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ.

– ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ನಾಲ್ಕು ಕೋಟಿ ರೂ.

– ಉತ್ತರ ಕನ್ನಡ ಜಿಲ್ಲೆಯ ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತುವ ಕಾಮಗಾರಿಗೆ ಐದು ಕೋಟಿ ರೂ.

– ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ.

– ಕೊಡೇರಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಎರಡು ಕೋಟಿ ರೂ. ಅನುದಾನ.

– ಉಡುಪಿಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ. (ದಾವಣಗೆರೆ, ದೊಡ್ಡಬಳ್ಳಾಪುರವೂ ಸೇರಿದಂತೆ).

Advertisement

Udayavani is now on Telegram. Click here to join our channel and stay updated with the latest news.

Next