Advertisement

ಜ. 28ರಿಂದ ಫೆ. 5ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ; ಮಾರ್ಚ್ ನಲ್ಲಿ ಬಜೆಟ್

01:33 PM Jan 13, 2021 | Team Udayavani |

ಬೆಂಗಳೂರು: ಇದೇ ತಿಂಗಳ 28ರಿಂದ ಫೆಬ್ರವರಿ 5ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Advertisement

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ.

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಎಲ್ಲ ನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಸಂಪುಟ ಒಪ್ಪಿಗೆ ನೀಡಲಾಯಿತು. ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಕಟ್ಟಡಗಳ ಆಸ್ತಿ ತೆರಿಗೆ 0.2ರಿಂದ 1.5ಕ್ಕೆ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. 1000 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಕ್ಕೆ ತೆರಿಗೆ ವಿನಾಯತಿ ನೀಡಲಾಗಿದೆ.

ಇದನ್ನೂ ಓದಿ:‘ನಮ್ಮ ಪಕ್ಷಕ್ಕೆ ಕೆಲವು ಇತಿಮಿತಿಗಳಿವೆ’: ಮುನಿರತ್ನ ವಿಚಾರಕ್ಕೆ ಅರುಣ್ ಸಿಂಗ್ ಪ್ರತಿಕ್ರಿಯೆ

ಬಾಲಗಂಗಾಧರಮಾಥ ಸ್ವಾಮೀಜಿ ಅವರ ಹುಟ್ಟೂರು ಬಾನಂದೂರಿನಲ್ಲಿ ಸಾಂಸ್ಕೃತಿಕ ಮತ್ತುಪಾರಂಪರಿಕ ಕೇಂದ್ರ ನಿರ್ಮಾಣಕ್ಕಾಗಿ 25 ಕೋಟಿ ರೂ. ವೆಚ್ಚದ ಯೋಜನೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next