ಬೆಂಗಳೂರು: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ರಕ್ಷಣಾ ಇಲಾಖೆ ಕಚೇರಿಗಳು, ಬ್ಯಾಂಕ್ ಗಳು, ರಿಸರ್ವ್ ಬ್ಯಾಂಕ್ ಸೇರಿದಂತೆ ಹಣಕಾಸು ಸಂಸ್ಥೆಗಳು ಶೇ 50 ರಷ್ಟು ಸಿಬ್ಬಂದಿಯೊಂದಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.
ರಕ್ಷಣಾ ಇಲಾಖೆ, ಕೇಂದ್ರ ಮೀಸಲು ಪಡೆ, ಟೆಲಿಕಮ್ಯುನಿಕೇಶನ್ ಇಲಾಖೆ ಶೇ 50 ರಷ್ಟು ಸಿಬ್ಬಂದಿಯೊಂದಿಗೆ ಕಚೇರಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಬ್ಯಾಂಕ್ ಗಳು, ರಿಸರ್ವ್ ಬ್ಯಾಂಕ್ ಅನುಮೋದಿತ ಹಣಹಾಸು ಸಂಸ್ಥೆಗಳು, ಎನ್ಪಿಸಿಐ, ಸಿಸಿಐಎಲ್ ನಂತಹ ಸೂಕ್ಷ್ಮ ಹಣಕಾಸು ಸಂಸ್ಥೆಗಳು, ಕೇಂದ್ರ ಸರ್ಕಾರದ ಆಡಳಿತಾತ್ಮಕ ಸಂಸ್ಥೆಗಳು ಶೇ 50 ರಷ್ಟು ಸಿಬ್ಬಂದಿಯೊಂದಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ :ಅನಾರೋಗ್ಯದಿಂದ ದೆಹಲಿಯ ಉದ್ಯಾನವನದಲ್ಲಿದ್ದ 7 ವರ್ಷದ ಸಿಂಹ ಸಾವು
ಅಲ್ಲದೇ ತುರ್ತು ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಲು ರೋಗಿಯ ಜೊತೆಗೆ ಒಬ್ಬರಿಗೆ ಅವಕಾಶ ಕಲ್ಪಿಸಲಾಗಿದೆ. ಲಸಿಕೆ ಪಡೆಯುವವರಿಗೆ ನಿರ್ಧಿಷ್ಟ ಸಮಯದ ಎಸ್ ಎಂ ಎಸ್ ಬಂದಿದ್ದರೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.