Advertisement
ಕನಿಷ್ಠ 500 ಕೊಠಡಿಯ ತ್ರಿ ತಾರಾ ಹೋಟೆಲ್ ನಿರ್ಮಾಣಕ್ಕೆ ಷೇರು ಬಂಡವಾಳ ನೀಡುವುದಾಗಿ ಹೇಳಿರುವ ಸರ್ಕಾರ, ಸರ್ವಿಸ್ ಅಪಾರ್ಟ್‌ಮೆಂಟ್ ಗಳನ್ನು ನಿರ್ಮಿಸುವ ಸಂಸ್ಥೆಗಳಿಗೆ “ಟರ್ಮ್ ಸೀಟ್’ ಆಧಾರದ ಮೇಲೆ ಶೇ.30ರಷ್ಟು ಷೇರು ಬಂಡವಾಳ ನೀಡುವುದಾಗಿ ಹೇಳಿದೆ. ಜತೆಗೆ ಅಮ್ಯೂಸ್ಮೆಂಟ್ ಪಾರ್ಕ್, ಜಲಕ್ರೀಡೆ ರೀತಿಯ ಸೌಲಭ್ಯ ಅಭಿವೃದಿಟಛಿಪಡಿಸುವ ಖಾಸಗಿ ಕಂಪೆನಿಗಳಲ್ಲಿ ಶೇ.30ರಷ್ಟು ಷೇರು ಬಂಡವಾಳ ಹೂಡಿಕೆಯ ಭರವಸೆ ನೀಡಿದೆ.
ಸಾಲಿನಿಂದ ಬೇಲೂರು, ಹಂಪಿ ಮತ್ತು ವಿಜಯಪುರದಲ್ಲಿ ವಿವಿಧ ಭಾಷೆಗಳಲ್ಲಿ ಪ್ರವಾಸಿ ಮಾರ್ಗದರ್ಶಿಗಳಾಗಿ ಕೆಲಸ ಮಾಡಲು ಆಸಕ್ತ ಯುವಕ-ಯುವತಿಯರಿಗೆ ತರಬೇತಿ ನೀಡಲು ಕೌಶಲ್ಯ ಅಭಿವೃದಿಟಛಿ ಯೋಜನೆಯಡಿ ಕ್ರಮ ಕೈಗೊಳ್ಳಲಾಗುವುದು. ಎರಡು ವರ್ಷದ ಡಿಪ್ಲೊಮಾ ತರಬೇತಿ ನೀಡಲು ಈ ಮೂರು ಸ್ಥಳಗಳಲ್ಲಿ ಮುಂದೆ ಬರುವ ಖಾಸಗಿ ತರಬೇತಿ ಸಂಸ್ಥೆಗೆ ತಲಾ 60 ಲಕ್ಷ ರೂ. ಷೇರು ಬಂಡವಾಳದ ರೂಪದಲ್ಲಿ ನೀಡಲಾಗುತ್ತದೆ. ಹೆಚ್ಚುವರಿ ಸೌಲಭ್ಯ
ಚಾಮರಾಜನಗರ ಜಿಲ್ಲೆಯ ಭರಚುಕ್ಕಿ ಜಲಪಾತ ಮತ್ತು ಮಂಡ್ಯ ಜಿಲ್ಲೆಯ ಗಗನಚುಕ್ಕಿ ಜಲಪಾತಗಳು ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ಇಲ್ಲಿ ಪ್ರವಾಸಿಗರ ಅನುಕೂಲಕ್ಕೆ ಹೆಚ್ಚುವರಿ ಸೌಲಭ್ಯ ಒದಗಿಸಲು 5 ಕೋಟಿ ರೂ. ಮೀಸಲಿಡಲಾಗಿದೆ. ರಾಮನಗರ ಜಿಲ್ಲೆಯಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಸದೃಢಗೊಳಿಸಲು ರಾಮನಗರದ ಬಳಿ ಆರ್ಟ್ಸ್ ಅಂಡ್ ಕ್ರಾಫ್ಟ್ ವಿಲೇಜ್ ಮತ್ತು ಕಣ್ವ ಜಲಾಶಯದ ಪ್ರದೇಶದಲ್ಲಿ ಚಿಲ್ಡ್ರನ್ ವರ್ಲ್ಡ್ ಯೋಜನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಉದ್ದೇಶಿಸಿದೆ.
Related Articles
ಮನೆಗೊಂದು ಮರ, ಊರಿಗೊಂದು ತೋಪು, ತಾಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ಕಾಡು ಕಲ್ಪನೆಯೊಂದಿಗೆ “ಹಸಿರು ಕರ್ನಾಟಕ’ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಜೆಟ್‌ನಲ್ಲಿ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದಲ್ಲಿ ಅರಣ್ಯ ಪ್ರಮಾಣ ಒಂದಿಷ್ಟು ಚೇತರಿಕೆಯಾಗುತ್ತಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸಾಮಾಜಿಕ ಅರಣ್ಯ ಬೆಳವಣಿಗೆಗೆ ಹೆಚ್ಚು ಒತ್ತು ನೀಡಲು ನಿರ್ಧರಿಸಿದ್ದೇನೆ. ರಾಜ್ಯದಲ್ಲಿರುವ ಸಣ್ಣ-ಪುಟ್ಟ ಬೆಟ್ಟ ಗುಡ್ಡಗಳು, ಗೋಮಾಳ ಮತ್ತು ಕೆರೆಗಳ ಸುತ್ತಲಿನ ಸರ್ಕಾರಿ ಜಮೀನುಗಳಲ್ಲಿ ಆಯಾ ಪ್ರದೇಶಕ್ಕೆ ಸೂಕ್ತವಾದ ಮರ-ಗಿಡಗಳನ್ನು ವ್ಯಾಪಕವಾಗಿ ಬೆಳಸಲು “ಹಸಿರು ಕರ್ನಾಟಕ’ ಯೋಜನೆಯನ್ನು ಆಂದೋಲನದ ಮಾದರಿ ಅನುಷ್ಠಾನಗೊಳಿಸಲಾಗುವುದು.
Advertisement
ಶಾಲಾ ಕಾಲೇಜು ವಿದ್ಯಾರ್ಥಿಗಳು, ಪರಿಸರ ಸಂಘಟನೆಗಳು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ಬೃಹತ್ ಪ್ರಮಾಣದಲ್ಲಿ ಬೀಜ ಸಹಿತ ಮಣ್ಣಿನ ಉಂಡೆಗಳ ಬಿತ್ತನೆ ಹಾಗೂ ಸಸಿಗಳನ್ನು ನೆಡಲು ಅನುಕೂಲವಾಗುವಂತೆ ಸರ್ಕಾರ ಮತ್ತು ಸಂಘ-ಸಂಸ್ಥೆಗಳು ಹಮ್ಮಿಕೊಳ್ಳುವ ಯೋಜನೆಗೆ ನೆರವು ನೀಡಲು 10 ಕೋಟಿ ರೂ. ಅನುದಾನ ಒದಗಿಸಲಾಗಿದೆ.