Advertisement
ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಬುಧವಾರ ಸದನದಲ್ಲಿ ಈ ಅಂಶಗಳನ್ನೊಳಗೊಂಡ ʼಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಕೆಲವು ಇತರೆ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ-2020ʼಯನ್ನು ಮಂಡಿಸಿದರು.
- ಈ ಮೊದಲು ದೂರಶಿಕ್ಷಣವು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿಯೂ ಲಭ್ಯವಿತ್ತು. ಇನ್ನು ಮುಂದೆ ದೂರ ಶಿಕ್ಷಣಕ್ಕೆ ಮಾತ್ರವೇ ಮೀಸಲಾಗಿದ್ದ ಈ ಶಿಕ್ಷಣವನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಮಾತ್ರ ನೀಡಲಾಗುತ್ತದೆ. ಮುಕ್ತ ವಿವಿಯ ವ್ಯಾಪ್ತಿಯೂ ರಾಜ್ಯಾದ್ಯಂತ ಇದ್ದು, ಇನ್ನು ಮುಂದೆ ಇತರೆ ವಿವಿಗಳಲ್ಲಿ ದೂರಶಿಕ್ಷಣ ನೀಡುವುದನ್ನು ನಿಲ್ಲಿಸಲಾಗುವುದು.
- ಬೆಂಗಳೂರಿನಲ್ಲಿ ಕೇಂದ್ರಸ್ಥಾನ ಹೊಂದಿರುವ ಸರಕಾರಿ ವಿಜ್ಞಾನ ಕಾಲೇಜು ಸಂಸ್ಥೆಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪ್ರತ್ಯೇಕಗೊಳಿಸಿ ʼಏಕಾತ್ಮಕ ಸ್ವರೂಪದ ನೃಪತುಂಗಾ ವಿವಿʼಯನ್ನು ಸ್ಥಾಪಿಸಲಾಗುತ್ತಿದ್ದು, ಇದರ ಕೇಂದ್ರ ಸ್ಥಾನವು ಬೆಂಗಳೂರು ನಗರದಲ್ಲೇ ಇರುತ್ತದೆ.
- ಗುಣಮಟ್ಟದ ಶಿಕ್ಷಣ ಹಾಗೂ ಸಂಪನ್ಮೂಲ ಕೊರತೆ ಆಗದಂತೆ ಎಲ್ಲ ವಿಶ್ವವಿದ್ಯಾಲಯಗಳಿಗೆ ಆದಾಯ ತರಿಗೆ ವಿನಾಯಿತಿ ಪ್ರಯೋಜನಗಳನ್ನು ಪಡೆದುಕೊಳ್ಳಲು ಅವಕಾಶ ನೀಡುವುದು. ಇದರಿಂದ ಎಲ್ಲ ವಿವಿಗಳಿಗೂ ಆರ್ಥಿಕ ಬಲ ಸಿಗಲಿದೆ.
- ಮಹಾರಾಣಿ ಕ್ಲಸ್ಟರ್, ಬೆಂಗಳೂರು ಮತ್ತು ಮಂಡ್ಯ ಏಕೀಕೃತ ವಿವಿಗಳಿಗೆ ಉಪ ಕುಲಪತಿಗಳನ್ನು ಸರಕಾರದಿಂದಲೇ ನೇಮಕ ಮಾಡುವುದು. ಎಲ್ಲ ವಿವಿಗಳಿಗೆ ಆಡಳಿತಾಧಿಕಾರಿ ಅಥವಾ ಕುಲಸಚಿವರನ್ನಾಗಿ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಲು ಅವಕಾಶ ಕಲ್ಪಿಸುವುದು.
- ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ʼಬೆಂಗಳೂರು ನಗರ ವಿಶ್ವವಿದ್ಯಾಲಯʼ ಎಂದು ಮರು ನಾಮಕರಣ ಮಾಡುವುದು.
- ವಿವಿಗಳಲ್ಲಿ ಕೆಲಸ ಮಾಡುವ ಲೆಕ್ಕಪತ್ರ ನಿಯಂತ್ರಕರ ಪದನಾಮವನ್ನು ʼಪ್ರಧಾನ ನಿರ್ದೇಶಕರು, ಕರ್ನಾಟಕ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆʼ ಎಂದು ಬದಲಿಸಲಾಗುವುದು.
Related Articles
Advertisement