Advertisement
ಸೂಟ್ ಕೇಸ್ ಸಂಸ್ಕೃತಿ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್ ನಲ್ಲಿ ಕೆಲವರು ಸೂಟ್ ಕೇಸ್ ಪಡೆಯುತ್ತಿದ್ದದ್ದು ನಿಜ. ಆದರೆ ಅವರೆಲ್ಲಾ ಈಗಾಗಲೇ ಪಕ್ಷ ಬಿಟ್ಟು ಹೋಗಿದ್ದಾರೆ. ಬಹುಶಃ ಅವರನ್ನು ಕುರಿತು ಪ್ರಜ್ವಲ್ ಹೇಳಿರಬಹುದು. ಈ ಬಗ್ಗೆ ಈಗಾಗಲೇ ಮಾತನಾಡಿ ಆಗಿದೆ. ಸೂಟ್ ಕೇಸ್ ಪಡೆಯುತ್ತಿದ್ದವರು ಮೊದಲ ಸಾಲಲ್ಲಿ ಕೂರುತ್ತಿದ್ದರು. ಈಗ ಅವರೆಲ್ಲ ಪಕ್ಷದಿಂದ ಹೊರನಡೆದಿದ್ದಾರೆ ಎಂದು ಹೇಳುವ ಮೂಲಕ ಬಂಡಾಯ ಶಾಸಕರಿಗೆ ಪರೋಕ್ಷ ಟಾಂಗ್ ನೀಡಿದ್ದರು.
ಸೂಟ್ ಕೇಸ್ ಇಲ್ಲದೆ ಪಕ್ಷ ಕಟ್ಟಲು ಸಾಧ್ಯವಾಗುತ್ತಾ? ಸಾಲ ಮಾಡಿ ಪಕ್ಷ ಕಟ್ಟಿರೋದೆಲ್ಲಾ ಸುಳ್ಳು. ಜೆಡಿಎಸ್ ಪಕ್ಷಕ್ಕೆ ಹಲವರು ಸಹಾಯ ಮಾಡಿದ್ದಾರೆ. ಎಲ್ಲಾ ಪಕ್ಷದಲ್ಲೂ ಸೂಟ್ ಕೇಸ್ ಸಂಸ್ಕೃತಿ ಇದೆ. ರಾಜಕೀಯದಲ್ಲಿ ಇದೆಲ್ಲಾ ಸರ್ವೆ ಸಾಮಾನ್ಯ ಎಂದು ಜೆಡಿಎಸ್ ಬಂಡಾಯ ಶಾಸಕರು ತಿರುಗೇಟು ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಕ್ಕೆ ಜೆಡಿಎಸ್ ಬಂಡಾಯ ಶಾಸಕರು ಸುದ್ದಿಗೋಷ್ಠಿ ನಡೆಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
Related Articles
Advertisement
ಏನಿದು ಸೂಟ್ ಕೇಸ್ ವಿವಾದ:ಜೆಡಿಎಸ್ ಪಕ್ಷದಲ್ಲಿ ಸೂಟ್ ಕೇಸ್ ರಾಜಕಾರಣ ನಡೆಯುತ್ತಿದೆ ಎಂದು ಇತ್ತೀಚೆಗೆ ಸ್ವತಃ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಬಹಿರಂಗ ಸಭೆಯಲ್ಲಿ ಆರೋಪಿಸಿದ್ದರು. ಈ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.