Advertisement
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆಲ್ಲಬೇಕು ಮತ್ತು ಅಧಿಕಾರ ಉಳಿಸಿ ಕೊಳ್ಳಬೇಕು. ಅದಕ್ಕಾಗಿ ಎ.16ರ ಒಳಗಾಗಿ ಸೂಕ್ತ ಕಾರ್ಯ ಯೋಜನೆ ಸಿದ್ಧಪಡಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ಮುಖಂಡರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈ ಹಿಂದಿನ ಎರಡು ಬಾರಿಯಂತೆ ಬಹು ಮತದ ಕೊರತೆ ಆಗ ಬಾರದು. ಟಾರ್ಗೆಟ್ 150 ಕೇವಲ ಬಾಯಿಮಾತಾಗ ಬಾರದು. ಹಳೆ ಮೈಸೂರು ಭಾಗ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಭಾಗಗಳಲ್ಲಿ ಪಕ್ಷ ಹೊಂದಿರುವ ನ್ಯೂನತೆಗಳನ್ನು ಪತ್ತೆಹಚ್ಚಿ ಅದನ್ನು ಸರಿ ಪಡಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
Related Articles
Advertisement
ಅವಧಿ ಪೂರ್ವ ಚುನಾವಣೆ ಇಲ್ಲಡಿಸೆಂಬರ್ನಲ್ಲೇ ಕರ್ನಾಟಕದಲ್ಲಿ ಚುನಾವಣೆ ನಡೆಸಲು ಚಿಂತನೆ ನಡೆದಿದೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ ಅವಧಿಪೂರ್ವ ಚುನಾವಣೆ ನಡೆಸದಿರಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ಚರ್ಚೆಯಿಲ್ಲ
ಬಹು ನಿರೀಕ್ಷಿತ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾವವಾಗಿಲ್ಲ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಅಮಿತ್ ಶಾ ಅವರು ಮುಖ್ಯಮಂತ್ರಿಗೆ ಪ್ರತ್ಯೇಕವಾಗಿ ಸೂಚನೆ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲಿ ಇರುವ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಕುರಿತು ರಾಜ್ಯದ ನಾಯಕರೇ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.