Advertisement

ವಿಷಪ್ರಸಾದ ಸೇವನೆ; ಮತ್ತೊಬ್ಬಳ ಸಾವು, ಸಾವಿನ ಸಂಖ್ಯೆ 15ಕ್ಕೆ ಏರಿಕೆ

01:23 PM Dec 18, 2018 | Sharanya Alva |

ಮೈಸೂರು: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸುಳ್ವಾಡಿ ಗ್ರಾಮದ  ಕಿಚ್ ಗುತ್ ಮಾರಮ್ಮ ದೇವಾಲಯದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೈಸೂರಿನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದುಂಡಮ್ಮ(50) ಮಂಗಳವಾರ ಮೃತಪಟ್ಟಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿದಂತಾಗಿದೆ.

Advertisement

ಮಲೆಮಹದೇಶ್ವರ ಬೆಟ್ಟ ನಿವಾಸಿ ದುಂಡಮ್ಮ ಅವರು ವಿಷಪ್ರಸಾದ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ವಿಷಾಹಾರ ಸೇವಿಸಿದ ಪ್ರಕರಣದಲ್ಲಿ 20ಕ್ಕೂ ಅಧಿಕ ಮಂದಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಸ್ವಸ್ಥಗೊಂಡ 80ಕ್ಕೂ ಅಧಿಕ ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕೃತ್ಯಕ್ಕೆ ಕಾರಣವಾದ ಕೆಲವು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next